/pejavara-vishvesha-tirtha-swamiji-no-more

ಉಡುಪಿಯ ಅಷ್ಟ ಮಠ ಗಳಲ್ಲಿ ಒಂದಾದ ಪೇಜಾವರ ಮಠದ ಸ್ವಾಮೀಜಿ ಶ್ರೀ ಶ್ರೀ ವಿಶ್ವೇಶ ತೀರ್ಥರು (88) ಇಂದು ಕೊನೆಯುಸಿರು ಎಳೆದಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೃಷ್ಣನಲ್ಲಿ ಲೀನರಾಗಿದ್ದಾರೆ.

1938 ರ ಡಿಸೆಂಬರ್ 3 ರಂದು ಅಧೋಕ್ಷಜ ತೀರ್ಥರ ಸಂಸ್ಥಾದ ಉತ್ತರಾಧಿಕಾರಿಯಾಗಿ ದೀಕ್ಷೆ ಪಡೆದ ಇವರು ಅಂದಿನಿಂದ ಇಂದಿನವರೆಗೂ ಯಶಸ್ವಿಯಾಗಿ ಪೇಜಾವರ ಪೀಠದ ಕಾರ್ಯವನ್ನು ಮುನ್ನಡೆಸಿಕೊಂಡು ಬಂದಿದ್ದರು. ಇವರು 1931 ರ ಎಪ್ರಿಲ್ 27 ರಂದು ನಾರಾಯಣಾಚಾರ್ಯ ಮತ್ತು ಕಮಲಮ್ಮ ದಂಪತಿಗಳ ಎರಡನೆಯ ಮಗನಾಗಿ ಉಪ್ಪಿನಂಗಡಿ ಸಮೀಪದ ರಾಮಕುಂಜ ಎಂಬಲ್ಲಿ ಜನಿಸಿದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹತ್ತಿರದ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲಿ ಪಡೆದರು. ಅಲ್ಲದೇ ಏಳು ವರ್ಷವಿದ್ದಾಗಲೇ ಶ್ರೀ ವಿಶ್ವಮಾನ್ಯ ತೀರ್ಥರಿಂದ ಉತ್ತರಾಧಿಕಾರಿಯಾಗಿ ದೀಕ್ಷೆಯನ್ನು ಪಡೆದರು.

ಇವರ ನಿಧನಕ್ಕೆ ದೇಶದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ,ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here