ಇಂದು ಕರ್ನಾಟಕದಾದ್ಯಂತ 63 ನೇ ರಾಜ್ಯೋತ್ಸವವನ್ನು ವಿಜ್ರಂಭನೆಯಿಂದ  ಆಚರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾ ಪೂರವೇ ಹರಿದಾಡುತ್ತಿದೆ. ಜನರು ವಾಟ್ಸ್ ಆಪ್, ಫೆಸ್ ಬುಕ್, ಟ್ವೀಟರ್  ಹೀಗೆ ಎಲ್ಲೆಡೆ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಕನ್ನಡಿಗರ ಈ ಶುಭದಿನದಂದು ದೇಶದ ರಾಷ್ಟ್ರಪತಿ ರಾಮನಾಥ್ ಕೋವಿಂದ್ , ಪ್ರಧಾನಿ ನರೇಂದ್ರ ಮೋದಿಯವರು ಶುಭಾಶಯವನ್ನು ಕನ್ನಡದಲ್ಲಿ ಕೋರಿದ್ದು ವಿಶೇಷವಾಗಿತ್ತು. 

“ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರುಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ” ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭ ಕೋರಿದ್ದಾರೆ. 

ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.— President of India (@rashtrapatibhvn) November 1, 2018

ಪ್ರಧಾನಿ ಮೋದಿಯವರು ” ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಬಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ : ಏರ್ಸೆಲ್-ಮಾಕ್ಸಿಸ್ ಹಗರಣ: ಚಿದಂಬರಂ ವಿಚಾರಣೆಗೆ ಒಪ್ಪಿಸಲು ಮನವಿ

ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.— Narendra Modi (@narendramodi) November 1, 2018

LEAVE A REPLY

Please enter your comment!
Please enter your name here