13-killed-tens-of-thousands-injured-in-volcanic-eruptions

ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡು 13 ಮಂದಿ ಮೃತಪಟ್ಟಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ.

ಸಿಮೇರು ಸಮೀಪದ ಲುಮಾಜಾಂಗ್‌ನ ಕೆರೊಬೊಕನ್ ಗ್ರಾಮದಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಈ ಪ್ರದೇಶದ ಮನೆಗಳು ಜ್ವಾಲಾಮುಖಿ ಸ್ಫೋಟಗೊಂಡು ಲಾವಾ ಹರಿದ ಪರಿಣಾಮ ಬಹುತೇಕ ನಾಶವಾಗಿವೆ. ಸಮೀಪದ ಗ್ರಾಮಗಳ ನಿವಾಸಿಗಳೂ ಭೀತಿಯಿಂದ ಮನೆಬಿಟ್ಟು ಇತರೆಡೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆರೊಬೊಕನ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಈವರೆಗೆ 13 ಮೃತದೇಹಗಳು ಪತ್ತೆಯಾಗಿವೆ. 41 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಲುಮಾಜಾಂಗ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here