ಬೆಂಗಳೂರು( ಜು.7): ರಾಜ್ಯದಲ್ಲಿ ಇಂದು 1498 ಪ್ರಖರಣಗಳು ದಾಖಲಾಗಿದ್ದು, ರಾಜ್ಯವು ಕೊರೊನಾ ಮಹಾಮಾರಿಗೆ ಬಲಿಯಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ 26, 815 ಜನರಿಗೆ ಇಲ್ಲಿಯವರೆಗೆ ಸೋಂಕು ತಗುಲಿದಂತಾಗಿದೆ. ಇದರೊಂದಿಗೆ ಕೊರೊನಾ 15 ಜನರನ್ನು ಬಲಿ ತೆಗೆದುಕೊಂಡಿದೆ.
ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರು ಎಷ್ಟು ?
ರಾಜ್ಯದಲ್ಲಿ ಇಂದು ಒಟ್ಟು 571 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆ 11,098 ಜನರು ಸೋಂಕಿನಿಂದ ಪಾರಾಗಿ ಮನೆ ಸೇರಿದ್ದಾರೆ. ಇನ್ನು ಈ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ 15,297 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಬೆಂಗಳೂರಿನ ಕರೋನಾ ಸ್ಥಿತಿ ಹೇಗಿದೆ ?
ಇಂದು ಒಂದೇ ದಿನದಲ್ಲಿ ರಾಜ್ಯದ ರಾಜಧಾನಿಯಲ್ಲಿ 800 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು 265 ಜನರು ಕೊರೊನಾ ಮುಕ್ತರಾಗಿದ್ದು, ಮನೆಗಳಿಗೆ ತೆರಳಿರುತ್ತಾರೆ. ಇದರೊಂದಿಗೆ ಇಲ್ಲಿಯವರೆಗೆ 1,810 ಜನರು ಗುಣಮುಖರಾಗಿದ್ದಾರೆ. ಇನ್ನೂ 9,395 ಜನರು ಸೋಂಕಿಗೆ ತುತ್ತಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇದರೊಂದಿಗೆ 155 ಜನರು ಕೋವಿಡ್-19 ರ ಸೋಂಕಿನಿಂದ ಇಲ್ಲಿಯವರೆಗೆ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ.
ಇಂದಿನ ಪತ್ರಿಕಾ ಪ್ರಕಟಣೆ 07/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/Ee4kIORkVe @BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/U3JavNiOCS— K’taka Health Dept (@DHFWKA) July 7, 2020
ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು ?
ಇಂದು ದಾಖಲಾದ ಕೊರೊನಾ ಪ್ರಕರಣಗಳನ್ನು ಜಿಲ್ಲಾವಾರು ನೋಡುತ್ತ ಹೋದರೆ, ಬೆಂಗಳೂರುನಗರ 800, ದಕ್ಷಿಣಕನ್ನಡ 83, ಧಾರವಾಡ 57, ಕಲಬುರಗಿ 51, ಬೀದರ್ 51, ಮೈಸೂರು 49, ಬಳ್ಳಾರಿ 45, ರಾಮನಗರ 37, ಉತ್ತರಕನ್ನಡ 35, ಶಿವಮೊಗ್ಗ 33, ಮಂಡ್ಯ 29, ಉಡುಪಿ 28, ಹಾಸನ 26, ಬಾಗಲಕೋಟೆ 26, ರಾಯಚೂರು 23, ವಿಜಯಪುರ 22, ಬೆಳಗಾವಿ 20, ತುಮಕೂರು 16, ಕೊಡಗು 14, ಯಾದಗಿರಿ 10, ದಾವಣಗೆರೆ 6, ಕೋಲಾರ 6, ಹಾವೇರಿ 6, ಚಾಮರಾಜನಗರ 6, ಚಿಕ್ಕಮಗಳೂರು 6, ಕೊಪ್ಪಳ 5, ಗದಗ 4, ಚಿಕ್ಕಬಳ್ಳಾಪುರ 3, ಚಿತ್ರದುರ್ಗ 1 ಸೋಂಕಿನ ಪ್ರಖರಣಗಳು ಪತ್ತೆಯಾಗಿವೆ.