ಕಂದಕಕ್ಕೆ ಉರುಳಿದ ಭಾರತೀಯ ಸೇನಾ ವಾಹನ, 16 ಯೋಧರು ಹುತಾತ್ಮ, ನಾಲ್ವರ ಸ್ಥಿತಿ ಗಂಭೀರ !

16-army-personnel-dead-after-truck-falls-into-gorge-in-sikkim

ಸಿಕ್ಕಿಂ: ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ.

ಚಟ್ಟೇನ್‌ನಿಂದ ಥಂಗು ಕಡೆಗೆ ತೆರಳುತ್ತಿದ್ದ ಸೇನಾ ವಾಹನ ತಿರುವು ಪಡೆಯುವಾಗ ಕಡಿದಾದ ಕಂದಕಕ್ಕೆ ಜಾರಿದೆ. ಅಪಘಾತದಲ್ಲಿ ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಹುತಾತ್ಮರಾದವರಲ್ಲಿ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 13 ಯೋಧರು ಸೇರಿದ್ದಾರೆ.

ಯೋಧರ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಗ್ಯಾಂಗ್‌ಟಾಕ್‌ನ ಸರ್ಕಾರಿ ಎಸ್‌ಟಿಎನ್‌ಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದ್ದು, ನಂತರ ಸೇನೆಗೆ ಹಸ್ತಾಂತರಿಸಲಾಗುತ್ತದೆ.

ಇದನ್ನೂ ಓದಿರಿ: Pragati Scholarship: ಸರ್ಕಾರ ನೀಡಲಿದೆ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾರ್ಷಿಕ 50 ಸಾವಿರ

16 ಯೋಧರು ಹುತಾತ್ಮ; ಸಂತಾಪ ಸೂಚಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ ಯೋಧರ ಸಾವಿನಿಂದ ನನಗೆ ತೀವ್ರ ನೋವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಹುತಾತ್ಮ ಯೋಧರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಕೃತಜ್ಞವಾಗಿದೆ. ಹುತಾತ್ಮ ಯೋಧರ ಕುಟುಂಬಗಳಿಗೆ ನಾನು ಸಂತಾಪ ತಿಳಿಸುತ್ತೇನೆ. ಇನ್ನು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿರಿ: 

LEAVE A REPLY

Please enter your comment!
Please enter your name here