1708-new-corona-cases-found-in-karnataka

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದ್ದು, ಇಂದು ಒಂದೇ ದಿನದಲ್ಲಿ 1,708 ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ ಪತ್ತೆಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 28,83,947 ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ ರಾಜ್ಯದಲ್ಲಿ 36 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು,  ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 36,157 ಕ್ಕೆ ಏರಿಕೆಯನ್ನು ಕಂಡಿದೆ.

ರಾಜ್ಯದಲ್ಲಿ ಇಂದು 2,463 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ 29,291 ಜನರು ಇನ್ನೂ ಸೋಂಕಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 386 ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಕೊರೋನಾ ಸೋಂಕಿನಿಂದ 9 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿರಿ: ಅನ್ ಲಾಕ್ 4.O: ನಾಳೆಯಿಂದಲೇ ಥಿಯೇಟರ್ ಓಪನ್, ನೈಟ್​ ಕರ್ಫ್ಯೂ 1 ಗಂಟೆ ಸಡಿಲ

ಜಿಲ್ಲಾವಾರು ಸೋಂಕಿತರ ಸಂಖ್ಯೆ :

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆಯನ್ನು ನೋಡುವುದಾದರೆ, ಬಾಗಲಕೋಟೆ 04, ಬಳ್ಳಾರಿ 1, ಬೆಳಗಾವಿ 55, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು ನಗರ 386, ಬೀದರ್ 8, ಚಾಮರಾಜನಗರ 23, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 105, ಚಿತ್ರದುರ್ಗ 15, ದಕ್ಷಿಣ ಕನ್ನಡ 241, ದಾವಣಗೆರೆ 23, ಧಾರವಾಡ 21, ಗದಗ 1, ಹಾಸನ 121, ಹಾವೇರಿ 8, ಕಲಬುರಗಿ 3, ಕೊಡಗು 45, ಕೋಲಾರ 33, ಕೊಪ್ಪಳ 2, ಮಂಡ್ಯ 53, ಮೈಸೂರು 210, ರಾಯಚೂರು 4, ರಾಮನಗರ 4, ಶಿವಮೊಗ್ಗ 82, ತುಮಕೂರು 64, ಉಡುಪಿ 105, ಉತ್ತರ ಕನ್ನಡ 44, ವಿಜಯಪುರ 1, ಯಾದಗಿರಿಯಲ್ಲಿ 0 ಪ್ರಕರಣಗಳು ವರದಿಯಾಗಿದೆ.

LEAVE A REPLY

Please enter your comment!
Please enter your name here