ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಘೋಷಣೆ ಮಾಡಿದ್ದಾರೆ.
ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಬಸ್ ಸಮಾವೇಶದಲ್ಲಿ ಮಾತನಾಡುತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇನ್ನಮೇಲೆ ನೀವ್ಯಾರು ಕರೆಂಟ್ ಗೆ ದುಡ್ಡುಕೊಡಬೇಕಾಗಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯುನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡಲಿದೆ ಎಂದು ಹೇಳಿದರು.
ಇದನ್ನೂ ಓದಿರಿ: ಭಾರತದ ಮತ್ತೊಂದು ಸಾಧನೆ: ಅಲ್ಪ ಶ್ರೇಣಿಯ ಬ್ಯಾಲೆಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದು ಹೇಳಿದ್ರು. ಯಾರಿಗಾದ್ರೂ ಆಯಿತಾ? ಇದು ಬಿ ರಿಪೋರ್ಟ್ ಬರೆಯುವ ಸರಕಾರ. ಮಂಚ, ಲಂಚ ಮತ್ತು 40 ಪರ್ಸೆಂಟ್ ಸರಕಾರ. ದೇಶದಲ್ಲಿ ಬರೀ ಕೋಮು ವಿಷ ಬೀಜ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿ ಹುದ್ದೆಗೆ 100 ಕೋಟಿ ರೂ., ಮಠಗಳ ಅನುದಾನಕ್ಕೆ 40 ಪರ್ಸೆಂಟ್, ಮೊಟ್ಟೆಗಳಿಗೆ 30 ಪರ್ಸೆಂಟ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿರಿ: ಬೆಳಗಾವಿಯಲ್ಲಿ ಪ್ರಜಾಧ್ವನಿ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ