ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಇಂದು ಕೊಂಚ ಪ್ರಮಾಣದ ಇಳಿಕೆಯು ಕಂಡುಬಂದಿದ್ದು, ಇಂದು ಬರೋಬ್ಬರಿ 492 ಜನರನ್ನು ಸೋಂಕು ಬಲಿಪಡೆದಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 20,628 ಜನರಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಇದರೊಂದಿಗೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 25,67,449 ಕ್ಕೆ ಏರಿಕೆಯನ್ನು ಕಂಡಿದೆ. ಇದರೊಂದಿಗೆ 42,444 ಜನರು ಸೋಂಕಿನಿಂದ ಗುಣಮುಖರಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಸದ್ಯ 3,50,066 ಜನರು ಬಳಲುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ಹೇಳಿದೆ.
ಇದನ್ನೂ ಓದಿರಿ: BREAKING NEWS: ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3500 ರೂಪಾಯಿ ನೆರವು
ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನದಲ್ಲಿ 4,889 ಜನರಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಇದರೊಂದಿಗೆ ನಗರದ ಒಟ್ಟು ಸೋಂಕಿತರ ಸಂಖ್ಯೆ 11,54,503 ಕ್ಕೆ ಏರಿಕೆ ಕಂಡಿದೆ. ಇಂದು ಬೆಂಗಳೂರು ನಗರವೊಂದರಲ್ಲೇ 278 ಜನರು ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಕೋವಿಡ್ ಸೋಂಕಿತರ ಸಂಖ್ಯೆ :
ಜಿಲ್ಲಾವಾರು ಸೋಂಕಿತರ ಮಾಹಿತಿಯನ್ನು ನೋಡುವುದಾದರೆ, ಬಾಗಲಕೋಟೆ 166, ಬಳ್ಳಾರಿ 671, ಬೆಳಗಾವಿ 1027, ಬೆಂಗಳೂರು ಗ್ರಾಮಾಂತರ 557, ಬೆಂಗಳೂರು ನಗರ 4889, ಬೀದರ್ 42, ಚಾಮರಾಜನಗರ 365, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 843, ಚಿತ್ರದುರ್ಗ 763, ದಕ್ಷಿಣ ಕನ್ನಡ 923, ದಾವಣಗೆರೆ 449, ಧಾರವಾಡ 519, ಗದಗ 307, ಹಾಸನ 1024, ಹಾವೇರಿ 194, ಕಲಬುರಗಿ 107, ಕೊಡಗು 333, ಕೋಲಾರ 684, ಕೊಪ್ಪಳ 350, ಮಂಡ್ಯ 453, ಮೈಸೂರು 1720, ರಾಯಚೂರು 340, ರಾಮನಗರ 181, ಶಿವಮೊಗ್ಗ 672, ತುಮಕೂರು 1102, ಉಡುಪಿ 684, ಉತ್ತರ ಕನ್ನಡ 536, ವಿಜಯಪುರ 210, ಯಾದಗಿರಿ 83 ಸೋಂಕಿತ ಪ್ರಕರಣಗಳು ದಾಖಲಾಗಿವೆ.
ಇಂದಿನ 29/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/udCNhhg3A9 @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/cdx5b1pnwV
— K’taka Health Dept (@DHFWKA) May 29, 2021