ಉತ್ತರ ಕನ್ನಡ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿಯಂತ್ರಣದಲ್ಲಿದ್ದ ಕೊರೋನಾ ಸೋಂಕು ಈಗ ಮತ್ತೆ ತನ್ನ ಆರ್ಭಟ ಹೆಚ್ಚಿಸಿದೆ. ಇಂದು ಹೊಸದಾಗಿ 208 ಜನರಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.
ಜಿಲ್ಲೆಯಲ್ಲಿ 1159 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಇದಲ್ಲದೆ ಜಿಲ್ಲೆಯಲ್ಲಿ 895 ಜನರು ಹೋಮ್ ಐಸೋಲೇಷನ್ ನಲ್ಲಿ ಇದ್ದು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 10980 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 8797 ಜನರು ಇಲ್ಲಿಯವರೆಗೆ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಇಂದು ಒಂದೇ ದಿನದಲ್ಲಿ ಮೂವರು ಸಾವಿಗೀಡಾಗಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ 129 ಕೊರೋನಾ ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆಯು ತಿಳಿಸಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಇಂದು 300 ಜನರು ಗುಣಮುಖರಾಗಿದ್ದು, ಮನೆಗಳಿಗೆ ತೆರಳಿದ್ದಾರೆ.