2116-new-covid-cases-found-in-karnataka

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ತಕ್ಕ ಮಟ್ಟಿಗೆ ಕಡಿಮೆಯಾಗುತ್ತಿದೆ. ಆದರೆ ಇಂದು ರಾಜ್ಯದಲ್ಲಿ 2,116 ಜನರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 8,55,912 ಜನರಲ್ಲಿ ಸೋಂಕು ಪತ್ತೆಯಾದಂತೆ ಆಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಅತೀ ಹೆಚ್ಚು ಅಂದರೆ 1,069 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಇದರೊಂದಿಗೆ 8 ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯು ತಿಳಿಸಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 3,985 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 21 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದು, ರಾಜ್ಯದ ಸೋಂಕಿತರ ಸಾವಿನ ಸಂಖ್ಯೆ 11,474 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನದಲ್ಲಿ 3,368 ಜನರು ಗುಣಮುಖರಾಗಿದ್ದು, 29,470 ಜನರು ಸೋಂಕಿನಿಂದ ಇನ್ನೂ ಬಳಲುತ್ತಿದ್ದಾರೆ.

LEAVE A REPLY

Please enter your comment!
Please enter your name here