2756-new-covid-cases-found-in-karnataka

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ತಗ್ಗುತ್ತ ಇಂದು ರಾಜ್ಯದಲ್ಲಿ 2,756 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ರಾಜ್ಯದ ಕೊರೋನಾ ಸಂಖ್ಯೆ 8,32,396 ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನದಲ್ಲಿ 26 ಜನರು ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟಾರೆಯಾಗಿ ಸಾವಿನ ಸಂಖ್ಯೆ 11,247 ಕ್ಕ ಏರಿಕೆಯಾಗಿದೆ. ಬೆಂಗಳೂರು ನಗರವೊಂದರಲ್ಲೇ 13 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿನಿನ ಗುಣಮುಖರಾಗುವವರ ಸಂಖ್ಯೆಯಲ್ಲಿಯೂ ಹೆಚ್ಚಳ ಕಂಡುಬಂದಿದ್ದು, ಇಂದು ಒಂದೇ ದಿನದಲ್ಲಿ 7,140 ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಗುಣವಾದವರ ಸಂಖ್ಯೆ 7,80,735 ಕ್ಕೆ ಏರಿಕೆಯಾಗಿದೆ.

ಇಲ್ಲಿಯವರೆಗೆ ರಾಜ್ಯದಲ್ಲಿ 8,32,396 ಜನರಲ್ಲಿ ಕೋವಿಡ್ – 19 ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ 7,80,735 ಜನರು ಗುಣವಾಗಿದ್ದಾರೆ. ಇನ್ನುಳಿದಂತೆ 40,395 ಜನರಲ್ಲಿ ಸೋಂಕು ಸಕ್ರೀಯವಾಗಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here