2nd-puc-results-tentatively-on-july20-clarifies-minister-suresh-kumar

ಬೆಂಗಳೂರು: ಕೊರೊನಾ ಸಂಕಷ್ಟದಿಂದಾಗಿ ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆಯು ಮುಂದೂಡಲ್ಪಟ್ಟು ಜೂನ್ 18 ರಂದು ನಡೆದಿತ್ತು. ಈಗ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಫಲಿತಾಂಶ ಹೊರಬೀಳುವ ಚಿಂತೆಯು ಕಾಡುತ್ತಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಕಾದಿರುವ ವಿದ್ಯಾರ್ಥಿಗಳು ಸಚಿವರನ್ನು ಪದೇ ಪದೆ ವಿಚಾರಿಸುತ್ತಿರುವ ಕಾರಣದಿಂದಾಗಿ ಸಚಿವ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿ ಎಲ್ಲ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಈ ರೀತಿ ಬರೆದುಕೊಂಡಿದ್ದಾರೆ, ‘ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ ಎರಡನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here