308-new-cases-found-in-karnataka

ಬೆಂಗಳೂರು (ಜೂನ್ 08): ರಾಜ್ಯದಲ್ಲಿಂದು ಹೊಸದಾಗಿ 308 ಕೋವಿಡ್-19 ಪಾಸಿಟಿವ್ ಪ್ರಖರಣಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 5760 ಕ್ಕೆ ತಲುಪಿದೆ. ಅಲ್ಲದೇ ಇಂದು ಬೆಂಗಳೂರು ನಗರದ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದ 67 ವರ್ಷದ ವ್ಯಕ್ತಿ, 48 ವರ್ಷದ ಮಹಿಳೆ ಮತ್ತು 65 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದಾಗಿ ಮೃತಪಟ್ಟಿದ್ದಾರೆ. 

ಇಂದು ಸೋಂಕಿಗೆ ಒಳಗಾದವರ ಜಿಲ್ಲಾವಾರು ಸಂಖ್ಯೆಯನ್ನು ನೋಡುವುದಾದರೆ ಕಲಬುರಗಿ 99, ಯಾದಗಿರಿ 66, ಬೀದರ್ 48, ಉಡುಪಿ 45, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2,  ಕೊಪ್ಪಳ 1, ರಾಮನಗರ 1 ಪ್ರಕರಣಗಳು ದಾಖಲಾಗಿವೆ.

LEAVE A REPLY

Please enter your comment!
Please enter your name here