3176-new-covid-19-cases-reported-in-karnataka

ಬೆಂಗಳೂರು(ಜು 15): ಇಂದು ರಾಜ್ಯದಲ್ಲಿ ಬರೋಬ್ಬರು 3176 ಜನರಿಗೆ ಕೊರೊನಾ ಸೋಂಕು ದೃಡ ಪಟ್ಟಿದೆ. ಕಳೆದೆರಡು ದಿನಗಳಿಂದ ಕೊರೊನಾ ಮರಣ ಪ್ರಮಾಣ ಹೆಚ್ಚುತ್ತಿದ್ದು, ಇಂದು ರಾಜ್ಯದಲ್ಲಿ 87 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 929 ಕ್ಕೆ ಏರಿಕೆಯಾದಂತಾಗಿದೆ.

ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರು ಎಷ್ಟು ?

ರಾಜ್ಯದಲ್ಲಿ ಇಂದು ಗುಣಮುಖರಾದವರು ಎಷ್ಟು ಎಂದು ನೋಡುವುದಾದರೆ, ಇಂದು 1076 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆ 18,446 ಜನರು ಸೋಂಕಿನಿಂದ ಪಾರಾಗಿ ಮನೆ ಸೇರಿದ್ದಾರೆ. ಇನ್ನು ಈ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ 27, 853 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು ?

ಇಂದು ದಾಖಲಾದ ಕೊರೊನಾ ಪ್ರಕರಣಗಳನ್ನು ಜಿಲ್ಲಾವಾರು ನೋಡುತ್ತ ಹೋದರೆ ಬೆಂಗಳೂರು 1975, ಧಾರವಾಡ 139, ಬಳ್ಳಾರಿ 136, ಮೈಸೂರು 99, ವಿಜಯಪುರ 80, ದಕ್ಷಿಣ ಕನ್ನಡ 76, ಕಲಬುರಗಿ 67, ಉಡುಪಿ 52, ಯಾದಗಿರಿ 49, ಉತ್ತರ ಕನ್ನಡ 48, ಬೆಳಗಾವಿ 41, ಗದಗ 39, ಬೀದರ್ 35, ದಾವಣಗೆರೆ 35, ಬಾಗಲಕೋಟೆ 34, ಚಿಕ್ಕಬಳ್ಳಾಪುರ 32, ಮಂಡ್ಯ 31, ಶಿವಮೊಗ್ಗ 29,  ರಾಯಚೂರು 26, ಹಾಸನ 25, ತುಮಕೂರು 24, ಕೊಡಗು 23, ಕೋಲಾರ 15, ಕೊಪ್ಪಳ 14, ಚಿಕ್ಕಮಗಳೂರು 13, ಚಿತ್ರದುರ್ಗ 12, ಬೆಂಗಳೂರು ಗ್ರಾಮಾಂತರ 10, ಚಾಮರಾಜನಗರ 8, ಹಾವೇರಿ 6, ರಾಮನಗರ 3 ಸೋಂಕಿನ ಪ್ರಖರಣಗಳು ಪತ್ತೆಯಾಗಿವೆ.

ಸಾವಿಗೀಡಾದ ಸೋಂಕಿತರು ಯಾವ ಯಾವ ಜಿಲ್ಲೆಯವರು ?

ಇಂದು ರಾಜ್ಯದಲ್ಲಿ 87 ಸೋಂಕಿತರು ಸಾವನ್ನಪ್ಪಿದ್ದಾರೆ. ಇವರ ಸಂಖ್ಯೆಯನ್ನು ಜಿಲ್ಲಾವಾರು ನೋಡುವುದಾದರೆ, ಬೆಂಗಳೂರು ನಗರ 60, ಮೈಸೂರು 6, ಧಾರವಾಡ 5, ಉತ್ತರ ಕನ್ನಡ 3, ಬಾಗಲಕೋಟೆ 3, ಚಿಕ್ಕಬಳ್ಳಾಪುರ 2, ರಾಯಚೂರು 2, ಮಂಡ್ಯ 1, ಶಿವಮೊಗ್ಗ 1, ಚಿಕ್ಕಮಗಳೂರು 1, ತುಮಕೂರು 1, ಚಿತ್ರದುರ್ಗ 1, ರಾಮನಗರ 1 ಸಾವಾಗಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here