covid-19-378-new-cases-in-karnataka

ಬೆಂಗಳೂರು (ಜೂ.23): ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದೆ. ಇಂದು ತ್ರಿಶತಕ ಭಾರಿಸುವ ಮೂಲಕ ಜನರಲ್ಲಿ ಆತಂಕ ಹೆಚ್ಚಿಗೆ ಮಾಡಿದೆ. ಇಂದು ಬರೋಬ್ಬರು 322 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9721 ಕ್ಕೆ ಬಂದು ನಿಂತಿದೆ.

ಮಂಗಳವಾರವೂ ಕೊರೊನಾ ಸೋಂಕಿನಿಂದ ಸಾವಿಗೀಡಾಗುವವರ ಸಂಖ್ಯೆ ಮುಂದುವರೆದಿದ್ದು, 8 ಜನರು ಬಲಿಯಾಗುವ ಮೂಲಕ ರಾಜ್ಯದಲ್ಲಿ ಇಲ್ಲಿಯವರೆಗೆ 150 ಸಾವು ಸಂಭವಿಸಿದಂತೆ ಆಗಿದೆ. ಮತ್ತೊಂದೆಡೆ ರಾಜ್ಯದ ರಾಜಧಾನಿ ಬೆಂಗಳೂರು ಸೋಂಕಿತರ ಗೂಡಾಗಿ ಪರಿವರ್ತನೆಯಾಗುತ್ತಿದೆ. ಇಂದು ಇಂದೇ ದಿನಕ್ಕೆ ಬೆಂಗಳೂರಿನಲ್ಲಿ 107 ಪ್ರಕರಣಗಳು ದಾಖಲಾಗಿವೆ.

ಇನ್ನು ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ದಾಖಲಾದ ಸಂಖ್ಯೆಗಳನ್ನು ನೋಡುವುದಾದರೆ, ಬೆಂಗಳೂರು ನಗರ 107, ಬಳ್ಳಾರಿ 53, ಬೀದರ್ 22, ಮೈಸೂರು 21, ವಿಜಯಪುರ 16, ಯಾದಗಿರಿ 13, ಉಡುಪಿ 11, ಗದಗ 9, ದಕ್ಷಿಣ ಕನ್ನಡ 8, ಕೋಲಾರ 8, ಹಾಸನ 7, ಕಲಬುರಗಿ 6, ಚಿಕ್ಕಬಳ್ಳಾಪುರ 5, ಶಿವಮೊಗ್ಗ 5, ಧಾರವಾಡ 4, ತುಮಕೂರು 4, ಕೊಪ್ಪಳ 4, ಚಾಮರಾಜ ನಗರ 4, ಉತ್ತರ ಕನ್ನಡ 3, ರಾಯಚೂರು 3,  ಮಂಡ್ಯ 2, ಬೆಳಗಾವಿ 2, ದಾವಣಗೆರೆ 2, ಹಾವೇರಿ 2, ಕೊಡಗು 1 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಇಂದು ಕಂಡುಬಂದ ಸೋಂಕಿತರಲ್ಲಿ 05 ಜನರು ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಮತ್ತು 64 ಜನರು ಅಂತರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 274 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 3563 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇನ್ನು ಸಾವಿನ ಸಂಖ್ಯೆಯು ರಾಜ್ಯದಲ್ಲಿ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 70 ವರ್ಷದ ವ್ಯಕ್ತಿ, ಬಳ್ಳಾರಿಯ 85 ವರ್ಷದ ಮಹಿಳೆ, ಬೆಂಗಳೂರು ನಗರದ 47, 85 ವರ್ಷದ ಮಹಿಳೆ ಮತ್ತು 37, 40, 67 ವರ್ಷಗಳ ಪುರುಷರು ಮೃತ ಪಟ್ಟವರಾಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here