ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಕೊಂಚ ಕಡಿಮೆಯಾಗಿದ್ದು, ಇಂದು 3,589 ಜನರಿಗೆ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ ಸೋಂಕು ತಗುಲಿದವರ ಸಂಖ್ಯೆ 8,20,398 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಅಂದರೆ 1,811 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಇಲ್ಲಿಯವರೆಗೆ 3,34,848 ಜನರು ಸೋಂಕಿಗೆ ತುತ್ತಾದಂತೆ ಆಗಿದೆ. ಇದಲ್ಲದೆ ಇಂದು ಒಂದೇ ದಿನದಲ್ಲಿ 27 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ತಗುಲುವ ಸಂಖ್ಯೆ ಕಡಿಮೆಯಾಗುತ್ತಿರುವುದರೊಂದಿಗೆ ಗುಣಮುಖರಾಗುವವರ ಸಂಖ್ಯೆಯಲ್ಲಿಯೂ ಹೆಚ್ಚಳ ಕಂಡುಬಂದಿದೆ. ಇಂದು ಒಂದೇ ದಿನದಲ್ಲಿ 8,521 ಜನರು ಡಿಸ್ಚಾರ್ಜ್ ಆಗಿದ್ದಾರೆ.