4169-new-covid-19-cases-reported-in-karnataka

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ ಮಹಾಮಾರಿ ಕೊರೋನಾಗೆ 4169 ಜನರು ಒಳಗಾಗಿದ್ದಾರೆ. ರಾಜ್ಯದ ರಾಜಧಾನಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 2344 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ 104 ಬಲಿಪಡೆದಿದ್ದು ಇಲ್ಲಿಯವರೆಗೆ ರಾಜ್ಯದ ಒಟ್ಟು ಸಾವಿನ ಸಂಖ್ಯೆ 1032 ಕ್ಕೆ ಏರಿಕೆಯಾದಂತಾಗಿದೆ.

ಇಂದು ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 2344 ಪ್ರಕರಣಗಳು ದಾಖಲಾಗಿವೆ. ಇನ್ನು ರಾಜ್ಯದಲ್ಲಿ ಇಂದು 4169 ರೊಂದಿಗೆ ಇಲ್ಲಿಯವರೆಗೆ ರಾಜ್ಯದ ಸೋಂಕಿತರ ಸಂಖ್ಯೆ 51,422 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೇವಲ 24 ಗಂಟೆಗಳಲ್ಲಿ 104 ಕೋವಿಡ್ ಸಾವುಗಳಾಗಿದ್ದು, ಬೆಂಗಳೂರೊಂದರಲ್ಲೇ 70 ಸೋಂಕಿತರು ಮರಣಹೊಂದಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಇದರೊಂದಿಗೆ ಇಂದು 1263 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದರೊಂದಿಗೆ ಗುನಮುಖರಾದವರ ಸಂಖ್ಯೆ 19,729 ಕ್ಕೆ ಏರಿಕೆಯಾಗಿದೆ. ಇನ್ನು 30,655 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇನ್ನು ರಾಜ್ಯವಾರು ಸೋಂಕಿತರ ಸಂಖ್ಯೆಯನ್ನು ನೋಡುತ್ತಾ ಹೋದರೆ, ಬೆಂಗಳೂರು 2344, ದಕ್ಷಿಣ ಕನ್ನಡ 238,  ಧಾರವಾಡ 176, ವಿಜಯಪುರ 144, ಮೈಸೂರು 130, ಕಲಬುರಗಿ 123, ಉಡುಪಿ 113, ರಾಯಚೂರು 101, ಬೆಳಗಾವಿ 92, ಉತ್ತರ ಕನ್ನಡ 79, ಚಿಕ್ಕಬಳ್ಳಾಪುರ 77, ಬೀದರ್ 53, ಶಿವಮೊಗ್ಗ 46, ಬಳ್ಳಾರಿ 44, ಗದಗ 44, ಕೋಲಾರ 43, ಬಾಗಲಕೋಟೆ 39, ಯಾದಗಿರಿ 34, ಕೊಪ್ಪಳ 32,  ಹಾಸನ 31, ಬೆಂಗಳೂರು ಗ್ರಾಮಾಂತರ 31, ಚಿಕ್ಕಮಗಳೂರು 30, ದಾವಣಗೆರೆ 25, ಚಿತ್ರದುರ್ಗ 21, ಹಾವೇರಿ 18, ಕೊಡಗು 18, ಚಾಮರಾಜನಗರ 16, ತುಮಕೂರು 12, ಮಂಡ್ಯ 11, ರಾಮನಗರ 4 ಸೋಂಕಿನ ಪ್ರಖರಣಗಳು ಪತ್ತೆಯಾಗಿವೆ.

LEAVE A REPLY

Please enter your comment!
Please enter your name here