41779-new-corona-cases-found-in-karnataka

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಜೋರಾಗಿಯೇ ಇದ್ದು, ಇಳಿಕೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ.ಇಂದು ಒಂದೇ ದಿನದಲ್ಲಿ ಬೆಂಗಳೂರು ನಗರದಲ್ಲಿ 14,316 ಸೇರಿ ರಾಜ್ಯದ 41,779 ಜನರಿಗೆ ಕೋವಿಡ್ ಪಾಸಿಟಿವ್ ವರದಿಯು ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 21,30,267 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 14,316 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಬೆಂಗಳೂರಿನ ಸೋಂಕಿತರ ಸಂಖ್ಯೆ 10,29,312 ಕ್ಕೆ ಏರಿಕೆಯಾಗಿದೆ. ಇದಲ್ಲದೆ ನಗರದಲ್ಲಿ 121 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 35,879 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 15,10,557 ಕ್ಕೆ ಏರಿಕೆಯಾಗಿದೆ. ಇದಲ್ಲದೆ 5,98,605 ಸಕ್ರೀಯ ಪ್ರಕರಣಗಳು ಇದ್ದು, ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಜಿಲ್ಲಾವಾರು ಸೋಂಕಿತರ ಮಾಹಿತಿ

ಇನ್ನು ರಾಜ್ಯದ ಜಿಲ್ಲೆಗಳ ಸೋಂಕಿನ ಸಂಖ್ಯೆಯನ್ನು ನೋಡುವುದಾದರೆ ಬೆಂಗಳೂರು ನಗರ 14316, ಬಾಗಲಕೋಟೆ 773, ಬಳ್ಳಾರಿ 2421,ಬೆಳಗಾವಿ 1592, ಬೆಂಗಳೂರು ಗ್ರಾಮಾಂತರ 707, ಬೀದರ್ 233, ಚಾಮರಾಜನಗರ 713, ಚಿಕ್ಕಬಳ್ಳಾಪುರ 676, ಚಿಕ್ಕಮಗಳೂರು 835, ಚಿತ್ರದುರ್ಗ 314, ದಕ್ಷಿಣ ಕನ್ನಡ 1215, ದಾವಣಗೆರೆ 581, ಧಾರವಾಡ 829, ಗದಗ 541, ಹಾಸನ 1339, ಹಾವೇರಿ 292, ಕಲಬುರಗಿ 929, ಕೊಡಗು 539, ಕೋಲಾರ 306, ಕೊಪ್ಪಳ 495, ಮಂಡ್ಯ 1385, ಮೈಸೂರು 2340, ರಾಯಚೂರು 1043, ರಾಮನಗರ 459, ಶಿವಮೊಗ್ಗ 1045, ತುಮಕೂರು 2668, ಉಡುಪಿ 1219, ಉತ್ತರ ಕನ್ನಡ 787, ವಿಜಯಪುರ 444, ಯಾದಗಿರಿ 683 ಪ್ರಕರಣಗಳು ದಾಖಲಾಗಿದೆ.

LEAVE A REPLY

Please enter your comment!
Please enter your name here