438-namma-clinic-will-start-across-karnataka-within-december-15th-minister-dr-k-sudhakar

ಬೆಂಗಳೂರು (ಅ.6): ರಾಜ್ಯದಲ್ಲಿ 438 “ನಮ್ಮ ಕ್ಲಿನಿಕ್“(Namma Clinic) ಗಳು ನವೆಂಬರ್ ಅಂತ್ಯ ಅಥವಾ ಡಿಸೇಂಬರ್ 15 ರವೇಳೆಗೆ ಕಾರ್ಯಾರಂಭ ಮಾಡಲಿವೆ, ಅಲ್ಲದೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ಕ್ಲಿನಿಕ್ ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆಯನ್ನು ಆಧಾರದಲ್ಲಿ ಇಟ್ಟುಕೊಂಡು ಅದಕ್ಕೆ ತಕ್ಕಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಆದರೆ ನಗರ ಪ್ರದೇಶಗಳಲ್ಲಿ ಈ ರೀತಿಯ ಆರೋಗ್ಯ ಸೌಲಭ್ಯ ಕಡಿಮೆ ಇವೆ. ಈ ಸಮಸ್ಯೆಯ ನಿವಾರಣೆಗೆ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕಡುಬಡವರಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬೊಮ್ಮಾಯಿಯವರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಸರಕಾರ ಆರ್ಥಿಕ ಸಹಕಾರ ನೀಡಿವೆ.

ಇದನ್ನೂ ಓದಿರಿ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಮಾಡುವುದು ಹೇಗೆ ?

ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿ ಲೇಔಟ್ ನ ವಾರ್ಡ್-58 ರ ಪಂಚಮುಖಿ ದೇವಸ್ಥಾನದ ಸಮೀಪ ನಮ್ಮ ಕ್ಲಿನಿಕ್ ಮಾದರಿ ವೀಕ್ಷಿಸಿ, ಸುದ್ದಿಗಾರರೊಂದಿಗೆ ಮಾತನಾಡುತ್ತ ಒಂದು ಕ್ಲಿನಿಕ್ ನಲ್ಲಿ ವೈದ್ಯ, ನರ್ಸಿಂಗ್ ಸಿಬ್ಬಂದಿ, ಲ್ಯಾಬ್ ಟೆಕ್ನಿಶಿಯನ್ ಹುದ್ದೆಹಳು ಇರಲಿವೆ. ಬಿಬಿಎಂಪಿ ವ್ಯಾಪ್ತಿಯ ಕ್ಲಿನಿಕ್ ಗಳಿಗೆ ವೈದ್ಯರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ 160 ವೈದ್ಯರು ನೇಮಕವಾಗಿದ್ದಾರೆ.

438-namma-clinic-will-start-across-karnataka-within-december-15th-minister-dr-k-sudhakar

ಸರ್ಕಾರಿ ಕಟ್ಟಡಗಳಲ್ಲಿ ಮತ್ತು ಬಾಡಿಗೆ ಕಟ್ಟಡಗಳಲ್ಲಿ 1 ಸಾವಿರದಿಂದ 12 ನೂರು ಚದರ ಅಡಿ ವಿಸ್ತೀರ್ಣದಲ್ಲಿ ಕ್ಲಿನಿಕ್ ರೂಪಿಸಲಾಗಿದೆ. ಪ್ರತಿವರ್ಷ ಸಿಬ್ಬಂದಿಗಾಗಿ 138 ಕೋಟಿ ರೂಪಾಯಿ ಮತ್ತು ನಾನ್ ರಿಕರಿಂಗ್ 17.52 ಕೋಟಿ  ಸೇರಿ 155 ಕೋಟಿ ರೂಪಾಯಿಗಳು ವೆಚ್ಚವಾಗಲಿವೆ ಎಂದು ಮಾಹಿತಿ ನೀಡಿದರು.

“ನಮ್ಮ ಕ್ಲಿನಿಕ್” ಯೋಜನೆ ಬಡತನ ರೇಖೆಗಿಂತ ಕೆಳಗಿರುವ ಮತ್ತು ಗುಡಿಸಲುಗಳಲ್ಲಿ ವಾಸಿಸುವ ಕಡುಬಡವರಿಗಾಗಿಯೇ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಂತೆಯೇ ಇವು ಕಾರ್ಯ ನಿರ್ವಹಿಸಲಿವೆ. ಇಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ, ಸರಕಾರಿ ಆರೋಗ್ಯ ಕಾರ್ಯಕ್ರಮ ಮೊದಲಾದ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿರಿ: ಉತ್ತರಾಖಂಡದಲ್ಲಿ ಬಸ್ ದುರಂತ: 25 ಜನರ ಸಾವು ಶಂಕೆ !

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here