4,439-new-corona-cases-found-in-karnataka

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಲೇ ಬರುತ್ತಿದೆ. ಆದರೆ ಒಟ್ಟಾರೆ ಸೋಂಕಿತರ ಸಂಖ್ಯೆ 8 ಲಕ್ಷ ಗಡಿ ದಾಟಿದೆ. ಒಂದೇ ದಿನ 4,439 ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 32 ಜನರು ವೈರಸ್ ಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,02,817 ಕ್ಕೆ ಏರಿಕೆಯಾಗಿದ್ದು, ಇಂದು 10,106 ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆಯಲ್ಲಿಯೂ ಏರಿಕೆಯನ್ನು ಕಂಡಿದ್ದು, ಇಲ್ಲಿಯವರೆಗೆ ಒಟ್ಟು 7,10,843 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಆಶಾದಾಯಕವಾಗಿ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 32 ಜನರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ಸೋಂಕಿತರ ಸಂಖ್ಯೆ 10,905 ಕ್ಕೆ ಏರಿಕೆಯನ್ನು ಕಂಡಿದೆ. ಇದಲ್ಲದೆ ಕೊರೋನಾ ಕಾರಣಗಳಲ್ಲದೆ ಇತರ ಕಾರಣಗಳಿಂದ 19 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ರಾಜ್ಯದ ರಾಜದಾನಿಯಲ್ಲಿ ಅತಿ ಹೆಚ್ಚು ಅಂದರೆ 2,468 ಕೋವಿಡ್ ಪ್ರಕರಣಗಳು ಇಂದು ಪತ್ತೆಯಾಗಿದ್ದು, ಇಲ್ಲಿ 20 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಬೆಂಗಳೂರು ಒಂದರಲ್ಲೇ 3,25,773 ಜನರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಇವರಲ್ಲಿ 51,672 ಜನರು ವಿವಿದೆಡೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯ ರಾಜಧಾನಿಯಲ್ಲಿ ಭಾನುವಾರ ರಾಜ್ಯದಲ್ಲೇ ಅತಿ ಹೆಚ್ಚು 2,468 ಸೋಂಕಿತರು ಪತ್ತೆಯಾಗಿದ್ದರೆ, ಬೆಂಗಳೂರು ಗ್ರಾಮಾಂತರ 234, ತುಮಕೂರು 141, ಮೈಸೂರು 140, ದಕ್ಷಿಣ ಕನ್ನಡ 139, ಬಳ್ಳಾರಿ 132, ಉಡುಪಿ 117 ಹಾಗೂ ಹಾಸನದಲ್ಲಿ 103 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನು, ಅಕ್ಟೋಬರ್ 25 ರಂದು ರಾಜ್ಯದಲ್ಲಿ 32 ಕೋವಿಡ್ – 19 ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಬೆಂಗಳೂರು ನಗರದಲ್ಲಿ 20 ಸೋಂಕಿತರು ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 8,02,817 ಸೋಂಕಿತರ ಪೈಕಿ 7,10,843 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here