4764-new-corona-cases-found-in-karnataka

ಬೆಂಗಳೂರು (ಅ.01): ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದಿದ್ದು, ಇಂದು 5,172 ಜನರಿಗೆ ಪಾಸಿಟಿವ್ ಬಂದಿದೆ. ಬೆಂಗಳೂರು ಒಂದರಲ್ಲೇ 1,852 ಜನರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಕೊರೊನಾ ಹಾಟ್ ಸ್ಪಾಟಾಗಿ ಪರಿವರ್ತನೆಯಾಗುತ್ತಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣವು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 3,860 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆ 53,648 ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ. ಇದಲ್ಲದೆ ಇಂದು ಒಂದೇ ದಿನದಲ್ಲಿ ಕೊರೊನಾ ಸೋಂಕಿನಿಂದ 98 ಜನರು ಅಸುನಿಗಿದ್ದಾರೆ ಎಂದು ಆರೋಗ್ಯ ಇಲಾಖ್ಯೆಯ ಮಾಹಿತಿ ತಿಳಿಸಿದೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಕೊರೊನಾ ಸೋಂಕಿನಿಂದಾಗಿ 2,412 ಜನರು ಸಾವನ್ನಪ್ಪಿದ್ದು, 53,648 ಮಂದಿ ಗುಣಮುಖರಾಗಿದ್ದಾರೆ. ಇದಲ್ಲದೇ ರಾಜ್ಯದಲ್ಲಿ ಸೋಂಕಿಗೆ ತುತ್ತಾಗಿ 73,219 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಿಲುಕಿದವರ ಸಂಖ್ಯೆ ಒಟ್ಟು 1,29,287 ಕ್ಕೆ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here