4537-new-covid-19-cases-reported-in-karnataka

ಬೆಂಗಳೂರು (ಜು. 26): ರಾಜ್ಯದಲ್ಲಿ ಇಂದು 5199 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 1950  ಪ್ರಖರಣಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 96,141 ಜನರು ಸೋಂಕಿಗೆ ಒಳಗಾದಂತೆ ಆಗಿದೆ.

ಇಂದು ಒಂದೇ ದಿನದಲ್ಲಿ 2088 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಒಟ್ಟು ರಾಜ್ಯದಲ್ಲಿ ಇಲ್ಲಿಯವೆರೆಗೆ 35,838 ಸೋಂಕಿತರು ಗುಣಮುಖರಾದಂತಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನೊಂದಿಗೆ ವಿವಿಧ ಆಸ್ಪತ್ರೆಗಳಲ್ಲಿ 58,417 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇನ್ನು ಜಿಲ್ಲಾವಾರು ಸೋಂಕಿತರ ಸಂಖ್ಯೆ ನೋಡುತ್ತಾ ಹೋದರೆ, ಬೆಂಗಳೂರು ನಗರ 1950, ಬಳ್ಳಾರಿ 579, ಮೈಸೂರು 230, ಬೆಂಗಳೂರು ಗ್ರಾಮಾಂತರ 213, ದಕ್ಷಿಣ ಕನ್ನಡ 199, ಉಡುಪಿ 169, ಧಾರವಾಡ 165, ಹಾಸನ 164, ಬೆಳಗಾವಿ 163, ಕಲಬುರಗಿ 152, ವಿಜಯಪುರ 132, ರಾಯಚೂರು 131, ದಾವಣಗೆರೆ 89, ಉತ್ತರ ಕನ್ನಡ 85, ಚಿಕ್ಕಬಳ್ಳಾಪುರ 81, ಬೀದರ್ 77, ಮಂಡ್ಯ 64, ಗದಗ 61, ಚಿಕ್ಕಮಗಳೂರು 61, ಯಾದಗಿರಿ 56, ಚಿತ್ರದುರ್ಗ 53, ಕೋಲಾರ 49, ಹಾವೇರಿ 47, ತುಮಕೂರು 46, ಬಾಗಲಕೋಟೆ 41, ಕೊಪ್ಪಳ 40, ಶಿವಮೊಗ್ಗ 39, ಚಾಮರಾಜನಗರ 28, ಕೊಡಗು 20, ರಾಮನಗರ 15  ಪ್ರಕರಣಗಳು ವರದಿಯಾಗಿವೆ.

LEAVE A REPLY

Please enter your comment!
Please enter your name here