5,356-new-corona-cases-found-in-karnataka

ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣುತ್ತಿದೆ. ಒಂದೇ ದಿನ 5,356 ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 51 ಜನ ಬಲಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 8,749 ಜನರು ಡಿಸ್ಚಾರ್ಜ್ ಆಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 6,93,584 ಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ 89,483 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ.

ರಾಜ್ಯದ ಒಟ್ಟಾರೆ ಇಲ್ಲಿಯವರೆಗಿನ ಸೋಂಕಿತರ ಸಂಖ್ಯೆ 7,93,907 ಆಗಿದ್ದರೆ ಕೋವಿಡ್‌ – 19 ನಿಂದ ಮೃತಪಟ್ಟವರ ಸಂಖ್ಯೆ 10,821 ಆಗಿದೆ. ಇದರೊಂದಿಗೆ 19 ಜನರು ಕೋವಿಡ್‌ ಅಲ್ಲದ ಅನ್ಯ ಕಾರಣಗಳಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಇಲ್ಲಿಯವರೆಗೆ ಬರೋಬ್ಬರಿ 3,21,054 ಜನರು ಸೋಂಕಿಗೆ ಒಳಗಾಗಿದ್ದಾರೆ. ಇಂದು ಇಲ್ಲಿ 2,688 ಜನರು ಸೋಂಕಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿಗೆ ಒಳಗಾದವರಂತೆ ಚೇತರಿಕೆಯ ಪ್ರಮಾಣವೂ ಹೆಚ್ಚಿದ್ದು, 4,335 ಜನರು ಇಂದು ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ ರಾಜ್ಯದಲ್ಲೇ ಅತಿ ಹೆಚ್ಚು 2,688 ಸೋಂಕಿತರು ಪತ್ತೆಯಾಗಿದ್ದರೆ, ದಕ್ಷಿಣ ಕನ್ನಡ 329, ದಾವಣಗೆರೆ 298, ಮೈಸೂರು 220, ಮಂಡ್ಯ 168, ಬೆಂಗಳೂರು ಗ್ರಾಮಾಂತರ 152, ಬಳ್ಳಾರಿ 115, ಉತ್ತರ ಕನ್ನಡ 113, ಹಾಸನ 109, ಚಿಕ್ಕಬಳ್ಳಾಪುರ 108, ಚಿಕ್ಕಮಂಗಳೂರು 102, ತುಮಕೂರು 100, ಚಿತ್ರದುರ್ಗ 99, ಧಾರವಾಡ 92, ವಿಜಯಪುರದಲ್ಲಿ 92 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ 51 ಕೋವಿಡ್ – 19 ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಬೆಂಗಳೂರು ನಗರದಲ್ಲಿ 21 ಸೋಂಕಿತರು ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದಾರೆ. ಇನ್ನುಳಿದಂತೆ ದಕ್ಷಿಣ ಕನ್ನಡ 4, ತುಮಕೂರು 4, ಮೈಸೂರು 3, ಶಿವಮೊಗ್ಗ, ಕೋಲಾರ, ಹಾಸನ, ಧಾರವಾಡ, ಚಿಕ್ಕಬಳ್ಳಾಪುರ, ಬಳ್ಳಾರಿ ತಲಾ 2 ಮತ್ತು ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ರಾಯಚೂರು, ಉಡುಪಿ ಮತ್ತು ವಿಜಯಪುರದಲ್ಲಿ ತಲಾ 1 ಸಾವು ಸಂಭವಿಸಿದೆ.

LEAVE A REPLY

Please enter your comment!
Please enter your name here