5778-new-corona-cases-found-in-karnatak

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ ಪ್ರಮಾಣದಲ್ಲಿ ಕೊರೋನಾ ಸೋಂಕಿನಿಂದ ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೊರೋನಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾಗಿದ್ದ, 13,550 ಜನರು ಗುಣಮುಖರಾಗಿದ್ದಾರೆ. ಇವೆಲ್ಲದರ ನಡುವೆ ಇಂದು 5778 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ 13,550 ಜನರು ಇಂದು ಗುಣಮುಖರಾಗಿದ್ದರೆ, ಇಲ್ಲಿಯವರೆಗೆ 6,85,168 ಜನರು ಸೋಂಕಿಗೆತುತ್ತಾಗಿ ಸುಲಭವಾಗಿ ಆರೋಗ್ಯವನ್ನು ಮರಳಿ ಪಡೆದುಕೊಂಡಿದ್ದಾರೆ. ಆದರೆ 92,927 ಜನರಲ್ಲಿ ಇನ್ನೂ ಸೋಂಕಿನ ಲಕ್ಷಣಗಳು ಮುಂದುವರೆದಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟಾರೆಯಾಗಿ ರಾಜ್ಯದ 7,88,551 ಜನರಿಗೆ ಈ ಸೋಂಕು ತಗುಲಿದ್ದು, ಈಗ ಈ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾದಂತೆ ಕಾಣುತ್ತಿದೆ.

ಇಂದು ರಾಜ್ಯದಲ್ಲಿ ಕೋವಿಡ್ -19 ರ ಸೋಂಕಿಗೆ ತುತ್ತಾಗಿ 74 ಜನರು ಪ್ರಾಣವನ್ನು ಬಿಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವೆಗೆ 10,770 ಜನರನ್ನು ಇದು ಬಲಿ ತೆಗೆದುಕೊಂಡಿದೆ. ಬೆಂಗಳೂರು ಒಂದರಲ್ಲೇ 36 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿರುವುದು ಬೇಸರದ ಸಂಗತಿಯಾಗಿದೆ.

ಇನ್ನುಳಿದಂತೆ ರಾಜ್ಯದಲ್ಲಿ ಅತೀ ಹೆಚ್ಚು ಸೋಂಕು ಬೆಂಗಳೂರು ನಗರದಲ್ಲಿ ಪತ್ತೆಯಾಗಿದ್ದು, 2,807 ಪ್ರಕರಣಗಳು ದಾಖಲಾಗಿವೆ. ಇನ್ನು ಮೈಸೂರಿನಲ್ಲಿ 308, ಬೆಂಗಳೂರು ಗ್ರಾಮೀಣ ಭಾಗದಲ್ಲಿ 280, ಚಿಕ್ಕಬಳ್ಳಾಪುರದಲ್ಲಿ 237, ಬಳ್ಳಾರಿಯಲ್ಲಿ 218 ಪ್ರಕರಣಗಳು ಪತ್ತೆಯಾಗಿವೆ.

LEAVE A REPLY

Please enter your comment!
Please enter your name here