ಬೆಂಗಳೂರು: ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಹಲವು ದಿನಗಳ ನಂತರ ಇಂದು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಸಚಿವ ಸಂಪುಟದಲ್ಲಿ ಯಾರೆಲ್ಲಾ ಸೇರ್ಪಡೆಯಾಗಬಹುದು ಎಂಬ ಗೊಂದಲಕ್ಕೆ ಇಂದು ತೆರೆ ಬಿದ್ದಿದ್ದು, ಬೊಮ್ಮಾಯಿ ಸಂಪುಟದಲ್ಲಿ ಬೆಂಗಳೂರಿನ ಏಳು ಶಾಸಕರು ಸ್ಥಾನ ಪಡೆದಿದ್ದಾರೆ.
ಈ ಬಾರಿ ಸಚಿವ ಸಂಪುಟದಲ್ಲಿ ಬೆಂಗಳೂರಿನ ಏಳು ಶಾಸಕರಿಗೆ ಅವಕಾಶ ದೊರೆತಿದ್ದು, ಆರ್. ಅಶೋಕ, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಬೈರತಿ ಬಸವರಾಜ, ಎಸ್ ಟಿ ಸೋಮಶೇಖರ್, ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಮುನಿರತ್ನ ಅವಕಾಶ ಪಡೆದುಕೊಂಡಿದ್ದಾರೆ.
ಕಳೆದ ಬಾರಿ ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಪಡೆದಿದ್ದ, ಒಕ್ಕಲಿಗ ಸಮುದಾಯದ ಶಾಸಕ ಆರ್ ಅಶೋಕ್ ಅವರು ಈ ಬಾರಿಯೂ ಆಯ್ಕೆಯಾಗಿದ್ದು, ಆದರೆ ಯಡಿಯೂರಪ್ಪ ಸಂಪುಟದಲ್ಲಿದ್ದ ಅರವಿಂದ್ ಲಿಂಬಾವಳಿ ಮತ್ತು ಎಸ್ ಸುರೇಶ ಕುಮಾರ್ ಅವರನ್ನು ಕೈ ಬಿಡಲಾಗಿದೆ.
ಇನ್ನು ಐದು ಬಾರಿ ಶಾಸಕರಾಗಿ ಆಯ್ಕೆಯಾದ, ಗೋವಿಂದರಾಜನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಇವರು ಪ್ರಭಲ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ಕಳೆದಬಾರಿ ವಸತಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ರಾಜರಾಜೇಶ್ವರಿ ನಗರದಿಂದ ಮುನಿರತ್ನ ಅವರಿಗೆ ಸ್ಥಾನ ದೊರೆತಿದ್ದು, ವಲಸಿಗ ಶಾಸಕರಲ್ಲಿ ಇವರಿಗೆ ಮೊದಲಬಾರಿ ಅವಕಾಶ ಒದಗಿಬಂದಿದೆ.
ಯಡಿಯೂರಪ್ಪ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ಸಿ ಏನ್ ಅಶ್ವಥ್ ನಾರಾಯಣ್ ಈ ಬಾರಿಯೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಕೆ ಗೋಪಾಲಯ್ಯ ಅವರು ಮಹಾಲಕ್ಷ್ಮಿ ಲೇಯೌಟ್ ಕ್ಷೇತ್ರದಿಂದ ಆಯ್ಕೆಯಾಗಿ ಮಂತ್ರಿಯಾಗುತ್ತಿದ್ದಾರೆ. ಬೈರತಿ ಬಸವರಾಜ್ ಅವರಿಗೂ ಒಂದು ಅವಕಾಶ ದೊರೆತಿದ್ದು, ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಎಸ್ ಟಿ ಸೋಮಶೇಖರ್ ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇವರು ಯಶವಂತ್ ಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿರಿ: ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್