4120-new-covid-19-cases-reported-in-karnataka

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಶಕ್ತಿಯನ್ನು ದಿನದಿಂದ ದಿನಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನದಲ್ಲಿ 7,883 ಪ್ರಕರಣ ಪತ್ತೆಯಾಗುವ ಮೂಲಕ ಹೊಸದೊಂದು ದಾಕಲೆಯನ್ನು ಮಾಡಿದೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 1,96,494 ಪ್ರಕರಣಗಳು ದಾಕಲಾಗಿವೆ.

ರಾಜ್ಯದಲ್ಲಿ ಸಾವಿನ ಸಂಖ್ಯೆಯೂ ಏರಿಕೆಯನ್ನು ಕಾಣುತ್ತಿದ್ದು, ಇಂದು 113 ಜನರು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 3,510 ಜನರು ಸಾವನ್ನಪ್ಪಿದ್ದಂತಾಗಿದೆ.

ಇದನ್ನೂ ಓದಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಣಮುಖ: ನಾಳೆ ಆಸ್ಪತ್ರೆಯಿಂದ ಬಿಡುಗಡೆ

ಇನ್ನು ಸಮಾಧಾನಕರ ವಿಚಾರವೆಂದರೆ ಸೋಂಕಿನಿಂದ ಚೆತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು, ಇಂದು 7,034 ಜನರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 1,12,633 ಜನರು ಚೇತರಿಸಿಕೊಂಡು ಮನೆಗೆ ತೆರಳಿದ್ದರೆ, ಇನ್ನೂ 80,343 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here