ಬೆಂಗಳೂರು (ಜೂ.27): ಇಂದು ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಕಂಡುಬಂದಿದ್ದು, ಕೋವಿಡ್-19 ಹಾವಳಿಗೆ ರಾಜ್ಯ ತತ್ತರಿಸಿ ಹೋಗಿದೆ. ಕೇವಲ 24 ಗಂಟೆಗಳಲ್ಲಿ 918 ಪ್ರಕರಣಗಳು ದಾಖಲಾಗುವ ಮೂಲಕ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 11,923 ಕ್ಕೆ ಏರಿಕೆಯಾದಂತಾಗಿದೆ.

ಇಂದು ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ 11 ಜನರು ಮೃತಪಟ್ಟಿದ್ದು, ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 191 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 3, ಬೀದರ್ 3, ಕಲಬುರಗಿ 2, ಗದಗ 1, ಬಳ್ಳಾರಿ 1, ಧಾರವಾಡ 1 ಸಾವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಜಿಲ್ಲಾವಾರು ಸೋಂಕಿತರ ಸಂಖ್ಯೆ ನೋಡುವುದಾದರೆ ಬೆಂಗಳೂರು ನಗರ 596, ದಕ್ಷಿಣ ಕನ್ನಡ 49, ಕಲಬುರಗಿ 33, ಬಳ್ಳಾರಿ 24, ಗದಗ 24, ಧಾರವಾಡ 19, ಬೀದರ್ 17, ಉಡುಪಿ 14, ಹಾಸನ 14, ಕೋಲಾರ 14, ಯಾದಗಿರಿ 13, ಶಿವಮೊಗ್ಗ 13, ತುಮಕೂರು 13, ಚಾಮರಾಜನಗರ 13, ಮಂಡ್ಯ 12, ಮೈಸೂರು 12, ಕೊಡಗು 9, ರಾಯಚೂರು 6, ದಾವಣಗೆರೆ 6, ಬೆಂಗಳೂರು ಗ್ರಾಮಾಂತರ 5, ಉತ್ತರ ಕನ್ನಡ 2, ಬಾಗಲಕೋಟೆ 2, ಚಿಕ್ಕಮಂಗಳೂರು 2, ಚಿತ್ರದುರ್ಗಾ 2, ಬೆಳಗಾವಿ 1, ಚಿಕ್ಕಬಳ್ಳಾಪುರ 1, ಕೊಪ್ಪಳ 1, ಹಾವೇರಿ 1 ಪ್ರಕರಣಗಳು ದಾಖಲಾಗಿವೆ.

LEAVE A REPLY

Please enter your comment!
Please enter your name here