2738-new-covid-19-cases-reported-in-karnataka

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿನದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದ್ದು, ಇಂದು ಒಂದೇ ದಿನದಲ್ಲಿ 9,523 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ ಕೊರೋನಾ ಸೋಂಕಿಗೆ ಒಳಗಾದವರ ಸಂಖ್ಯೆ 7,10,309 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 10,107 ಜನರು ಗುಣಮುಖರಾಗಿದ್ದು, ಇದರೊಂದಿಗೆ ಇಲ್ಲಿಯವರೆಗೆ 5,80,054 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದಲ್ಲದೆ ಇಂದು ರಾಜ್ಯದಲ್ಲಿ 75 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಸೋಂಕು ವೇಗವಾಗಿ ಹರಡುತ್ತಿದ್ದು, ಇಂದು 4,623 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು ಗುಣಮುಖರಾಗಿ 2,656 ಜನರು ಮನೆಗಳಿಗೆ ತೆರಳಿದ್ದಾರೆ. ಇದಲ್ಲದೆ 66,854 ಜನರಲ್ಲಿ ಸೋಂಕು ಇನ್ನೂ ಸಕ್ರಿಯವಾಗಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here