397-new-corona-cases-found-in-karnataka

ಬೆಂಗಳೂರು(ಜು.9): ರಾಜ್ಯದಲ್ಲಿ ಇಂದು ಒಂದೇ ದಿನಕ್ಕೆ 2228 ಹೊಸ ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಇದರೊಂದಿಗೆ 17 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿನ ಒಟ್ಟಾರೆ ಸೋಂಕಿನ ಸಂಖ್ಯೆ 31,105 ಕ್ಕೆ ಬಂದು ನಿಂತಿದೆ.

ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರು ಎಷ್ಟು ?

ರಾಜ್ಯದಲ್ಲಿ ಇಂದು ಒಟ್ಟು 957 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆ 12,833 ಜನರು ಸೋಂಕಿನಿಂದ ಪಾರಾಗಿ ಮನೆ ಸೇರಿದ್ದಾರೆ. ಇನ್ನು ಈ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ 17,782 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು ?

ಇಂದು ದಾಖಲಾದ ಕೊರೊನಾ ಪ್ರಕರಣಗಳನ್ನು ಜಿಲ್ಲಾವಾರು ನೋಡುತ್ತ ಹೋದರೆ ಬೆಂಗಳೂರು 1,373, ದಕ್ಷಿಣಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರಕನ್ನಡ 23, ಉಡುಪಿ 22, ಹಾಸನ 21, ಹಾವೇರಿ 18, ರಾಮನಗರ 17, ರಾಯಚೂರು 16,  ಯಾದಗಿರಿ 16, ಬೆಂಗಳೂರು ಗ್ರಾಮಾಂತರ 16, ಬೀದರ್ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 05, ಕೊಡಗು 4, ಕೊಪ್ಪಳ 2, ಚಿತ್ರದುರ್ಗ 02, ವಿಜಯಪುರ 01 ಸೋಂಕಿನ ಪ್ರಖರಣಗಳು ಪತ್ತೆಯಾಗಿವೆ.

ಇಂದು ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಸಾವಿನ ಪ್ರಖರಣಗಳು ?

ಇಂದು ರಾಜ್ಯದಲ್ಲಿ ಒಟ್ಟು 17 ಸಾವಾಗಿದ್ದು, ಜಿಲ್ಲಾವಾರು ನೋಡುವುದಾದರೆ ಧಾರವಾಡ 7, ಹಾಸನ 2, ಕಲಬುರಗಿ 2, ಮೈಸೂರು 2, ತುಮಕೂರು 1, ದಾವಣಗೆರೆ 1, ರಾಯಚೂರು 1, ಉತ್ತರ ಕನ್ನಡ 1 ಸಾವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here