action-if-the-mask-is-not-worn-state-governments-preparation-for-fines

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ರಾಜ್ಯಸರ್ಕಾರ ಮುಂದಾಗಿದ್ದು, ಮಾಸ್ಕ್ ಧರಿಸುವವುದು ಕಡ್ಡಾಯ ನಿಯಮವನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದೆ.

ಇಂದು ವಿಧಾನ ಸೌಧದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಮಾಸ್ಕ್ ಧರಿಸದೇ ನಗರ ಪ್ರದೇಶದಲ್ಲಿ ಓಡಾಡುವವರಿಗೆ ರೂಪಾಯಿ 1000 ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರೂಪಾಯಿ 500 ದಂಡವನ್ನು ವಿಧಿಸುವ ನಿಯಮವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಇದಲ್ಲದೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಹೀಗೆ ಅಂತರವನ್ನು ಕಾಯ್ದುಕೊಳ್ಳದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದೆ ಸಮಯದಲ್ಲಿ ಮಾತನಾಡಿದ ಅವರು, ಸಭೆ ಸಮಾರಂಭಗಳಲ್ಲಿ ಹೆಚ್ಚಿನ ಜನರನ್ನು ಸೇರಿಸುವುದನ್ನು ನಿಷೇಧಿಸಲಾಗಿದೆ. ಹೆಚ್ಚಿನ ಜನ ಸೇರಿದಲ್ಲಿ ಆಯೋಜಕರ ವಿರುದ್ಧ ಕ್ರಮವನ್ನು ಕೈಗೊಳ್ಳಲಾಗುವುದು. ಮದುವೆ ಮುಂಜಿ ಸಮಾರಂಭಗಳಿಗೆ ಕೇವಲ 50 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಅದಕ್ಕಿಂತ ಹೆಚ್ಚಿಗೆ ಜನ ಸೇರಿದ್ರೆ ಮದುವೆ ಕಾರ್ಯಕ್ರಮ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here