ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಆಯೋಜನೆಗೊಂಡಿರುವ 26 ನೇಯ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಇಂದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಎಸ್ಪಿಜಿ ತನ್ನ ಸುಪರ್ದಿಗೆ ಪಡೆದಿದೆ. ಏರ್ಪೋರ್ಟ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಧಾನಿ ಆಗಮಿಸುವ ಒಂದು ಗಂಟೆ ಮುನ್ನ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. 60 ಪಿಐ, 18 ಕೆಎಸ್‌ಆರ್‌ಪಿ, ಗರುಡಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸುಗಮ ಸಂಚಾರಕ್ಕೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿರಿ: ಭಾರತದ ಮುಸ್ಲಿಮರು ಭಯಪಡುವ ಅಗತ್ಯ ಇಲ್ಲ; ಆದರೆ ಒಂದು ಸಲಹೆ-ಮೋಹನ್ ಭಾಗವತ್
ಪ್ರಧಾನಿ ನರೇಂದ್ರ ಮೋದಿಯವರು ಬರುವ ಮಾರ್ಗದುದ್ದಕ್ಕೂ ಎಸ್ಕಾರ್ಟ್ ಸಿಬಂದಿ ನಿಯೋಜನೆ ಮಾಡಲಾಗಿದೆ. ಯಾವುದೇ ಸಂಘಟನೆ ಅಥವಾ ಯಾರಾದರು ಮನವಿ ಕೊಡುವವರಿದ್ದರೆ ಪೊಲೀಸ್ ಕಮೀಷನರ್/ಡಿಸಿಗೆ ಮನವಿ ಕೊಡಬಹುದು ಎಂದು ಹುಬ್ಬಳ್ಳಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿರಿ: National Youth Festival: ಇಂದು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಗೆ ಪ್ರಧಾನಿ ಮೋದಿ