am-deeply-anguished-pm-modi-on-cds-bipin-rawat-demise

ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.

ಭಾರತದ ಮೂರು ಸೇನಾ ಪಡೆಗಳ ಮೊದಲ ಮುಖ್ಯಸ್ಥ ರಾವತ್ ನಿಧನಕ್ಕೆ ಸಂತಾಪಗಳ ಮಹಾಪೂರವೇ ಹರಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚನ್ನಿ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here