amitabh-bachchan-rajinikanth-may-attend-event-to-honour-puneeth-rajkumar-with-karnataka-ratna

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಹಾಗೂ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿರಿ: “ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ” ಪುನೀತ್ ರಾಜಕುಮಾರ್ ಟ್ವಿಟ್ಟರ್ ಖಾತೆಯಿಂದ ಹೊಸ ಪೋಸ್ಟ್ !

ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡುವ ಕಾರ್ಯಕ್ರಮಕ್ಕೆ ಗಣ್ಯರನ್ನು ರಾಜ್ಯ ಸರಕಾರ ಆಮಂತ್ರಿಸಿದೆ.  ಕನ್ನಡ ಚಿತ್ರರಂಗದ ದಿಗ್ಗಜರ ಜೊತೆಗೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್ ಟಿ ಆರ್, ಅಮಿತಾಭ್ ಬಚ್ಚನ್, ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಐಶ್ವರ್ಯಾ ರೈ ಬಚ್ಚನ್ ಅವರಿಗೂ ವಿಶೇಷ ಆಹ್ವಾನ ನೀಡಲಾಗಿದೆ.

ಇದುವರೆಗೆ ಎಂಟು ಜನರಿಗೆ “ಕರ್ನಾಟಕ ರತ್ನ” ಪ್ರಶಸ್ತಿ ವಿತರಿಸಲಾಗಿದ್ದು, 2009 ರ ನಂತರ ಮೊಟ್ಟ ಮೊದಲ ಬಾರಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ವಿತರಿಸಲಾಗುವುದು.

ಇದನ್ನೂ ಓದಿರಿ: T-20 World Cup: ನೆದರ್ಲೆಂಡ್ಸ್ ವಿರುದ್ಧ ಸುಲಭವಾಗಿ ಗೆದ್ದ ಭಾರತ !

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here