anand-mamani-s-funeral-will-be-held-with-state-honour

ಬೆಳಗಾವಿ: ಅನಾರೋಗ್ಯದಿಂದ ನಿನ್ನೆ ಕೊನೆಯುಸಿರೆಳೆದಿದ್ದ ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಅವರ ಅಂತ್ಯ ಸಂಸ್ಕಾರ ಸವದತ್ತಿ ಜಿಲ್ಲೆಯ ಅವರ ಪಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಅಗಲಿದ ನಾಯಕನ ಪಾರ್ಥಿವ ಶರೀರವನ್ನು ಜಿಲ್ಲೆಯ ಸವದತ್ತಿ ತಾಲೂಕಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಜಿಲ್ಲೆಯ ಅನೇಕ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಹಿರಿಯ ನಾಯಕರು ಸೇರಿದಂತೆ ಹಲವಾರು ಅಂತಿಮ ದರ್ಶನ ಪಡೆದರು.  ಬೆಂಗಳೂರಿನಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಹುತಾತ್ಮ ಗೌರವ ಪಡೆಯ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ರಾಷ್ಟ್ರಗೀತೆ ನುಡಿಸುವ ಮೂಲಕ ಸರ್ಕಾರಿ ಗೌರವ ವಂದನೆ ಸಲ್ಲಿಸಿ, ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ರತ್ನಾ ಆನಂದ ಮಾಮನಿ ಅವರಿಗೆ ರಾಷ್ಟ್ರ ಧ್ವಜವನ್ನು ನೀಡುವ ಮೂಲಕ ಸರ್ಕಾರಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪತ್ನಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಇದನ್ನೂ ಓದಿರಿ: Ayodhya Deepotsav: ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಬಂದಿಳಿದ ಮೋದಿ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here