ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಅರವಿಂದ್ ಕೇಜ್ರಿವಾಲ್ ಘೋಷಣೆ

arvind-kejriwal-profoundly-remember-dr-puneeth-rajkumar-death-anniversary

ನವದೆಹಲಿ: ಆಮ್ ಆದ್ಮಿ ಪಕ್ಷದ ಸುಪ್ರೀಂ ಲೀಡರ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಆಮ್ ಆದ್ಮಿ ಪಕ್ಷವನ್ನು ರಾಷ್ಟೀಯ ಪಕ್ಷವೆಂದು ಘೋಷಣೆ ಮಾಡಿದ್ದಾರೆ.

ಬಿಜೆಪಿ ಭದ್ರಕೋಟೆಯಲ್ಲಿ ತನ್ನ ಕೆಲ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಲು ಅಗತ್ಯವಿರುವಷ್ಟು ಓಟಿಂಗ್ ಪಡೆದ ನಂತರ ಇಂದು ಆಮ್ ಆದ್ಮಿ ಪಕ್ಷದ ಸುಪ್ರೀಂ ಲೀಡರ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟೀಯ ಪಕ್ಷವೆಂದು ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, “ಗುಜರಾತ್ ಚುನಾವಣೆಯ ಫಲಿತಾಂಶಗಳು ಬಂದಿವೆ. ಈ ಮೂಲಕ ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ಎಎಪಿ ಒಂದು ಸಣ್ಣ ಪಕ್ಷವಾಗಿತ್ತು, ಈಗ ಅದು 2 ರಾಜ್ಯಗಳಲ್ಲಿ ಸರ್ಕಾರಗಳನ್ನು ಹೊಂದಿದೆ ಮತ್ತು ರಾಷ್ಟ್ರೀಯ ಪಕ್ಷವಾಗಿ ಮಾರ್ಪಟ್ಟಿದೆ” ಎಂದು ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ವೀಡಿಯೊ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್ನಲ್ಲಿ ಬಿಜೆಪಿ ಭರ್ಜರಿ ಜಯ, ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ವಿಜಯೋತ್ಸವ ಭಾಷಣ

LEAVE A REPLY

Please enter your comment!
Please enter your name here