basavarj-bommai-gave-warning-who-harmful-post-on-social-media

ಬೆಂಗಳೂರು: ಸಾಮಾಜಿಕ ತಾಣಗಳಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಪ್ರಚೋದಿತ ಪೋಸ್ಟ್, ಕಾಮೆಂಟ್ ಹಾಕುವವರಿಗೆ ಇನ್ನು ಮೇಲೆ ಗಂಡಾಂತರ ಕಾದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾಮಾಜಿಕ ತಾಣಗಳಲ್ಲಿ ಇತ್ತೀಚಿಗೆ ಶಾಂತಿಭಂಗ ತರುವ ಮತ್ತು ಭಾವನೆಗಳಿಗೆ ದಕ್ಕೆ ತರುವಂತಹ ಕಾರ್ಯವು ಹೆಚ್ಚಾಗುತ್ತಿದೆ. ಇಂತವರ ಮೇಲೆ ಇನ್ನು ಮುಂದೆ ಪೊಲೀಸರು ಕಣ್ಣಿಡಲಿದ್ದಾರೆ. ಇಂತಹ ಘಟನೆಗಳು ನಡೆದ ನಂತರದಲ್ಲಿ ಕ್ರಮ ಕೈಗೊಳ್ಳುವುದು ಒಂದು ಭಾಗವಾದರೆ ಇಂತಹ ಘಟನೆಗಳು ನಡೆಯದಂತೆ ಕೃಮ ಕೈಗೊಳ್ಳುವುದು ಹೇಗೆ ಎನ್ನುವ ಕುರಿತು ಸೈಬರ್ ಕ್ರೈಂ ಪೊಲೀಸರೊಂದಿಗೆ ಚರ್ಚಿಸಿ ಅಗತ್ಯ ಬದಲಾವಣೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪರಿಸ್ಥಿತಿ ಶಾಂತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಅಗಸ್ಟ್ 18 ರ ವರೆಗೂ ಮುಂದುವರೆಯಲಿದೆ ಎಂದು ತಿಳಿಸಿದರು. ಪ್ರಕರಣದ ತನಿಕೆಯು ಮುಂದುವರೆದಿದ್ದು, ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸರಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ನೀವು ತಿಳಿದಿರದ ಎಂ ಸ್ ಧೋನಿಯ ಜೀವನ ಮತ್ತು ಕ್ರಿಕೆಟ್ ಇತಿಹಾಸ

LEAVE A REPLY

Please enter your comment!
Please enter your name here