bel-recruitment-2021-for-88-project-engineer-and-trainee-engineer-posts-apply-before-oct-27

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬಿಇಎಲ್ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಒಟ್ಟು 88 ಟ್ರೈನಿ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಒಟ್ಟು ಹುದ್ದೆಗಳು :

ಟ್ರೈನಿ ಎಂಜಿನಿಯರ್ ಹುದ್ದೆಗಳು – 55
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು – 33

ವಿದ್ಯಾರ್ಥತೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಅಧಿಸೂಚನೆ 2021 ರಲ್ಲಿ ಅರ್ಜಿ ಸಲ್ಲಿಸಲು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ – ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಟೆಲಿಕಮ್ಯುನಿಕೇಷನ್/ಕಮ್ಯುನಿಕೇಶನ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಬಿ.ಇ/ಬಿ.ಟೆಕ್ ಪದವಿ ಜೊತೆಗೆ ಹುದ್ದೆಗೆ ಸಂಬಂಧಪಟ್ಟಂತೆ ಕೈಗಾರಿಕಾ ವಲಯದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ :

ಬಿಇಎಲ್ ನೇಮಕಾತಿ ಅಧಿಸೂಚನೆ 2021 ರಲ್ಲಿ ಟ್ರೈನಿ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ವಯೋಮಿತಿಯು ಅಕ್ಟೋಬರ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 (ಟ್ರೈನಿ ಇಂಜಿನಿಯರ್) ಮತ್ತು ಗರಿಷ್ಟ 28 ವರ್ಷ ( ಪ್ರಾಜೆಕ್ಟ್ ಇಂಜಿನಿಯರ್) ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ಪ್ರಕ್ರೀಯೆ :

ಬಿಇಎಲ್ ನೇಮಕಾತಿ ಅಧಿಸೂಚನೆ 2021 ರಲ್ಲಿ ಟ್ರೈನಿ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಪಟ್ಟಿಯನ್ನು ಮಾಡಲಾಗುವುದು. ಆನಂತರ ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಬಿಇಎಲ್ ನೇಮಕಾತಿ ಅಧಿಸೂಚನೆ 2021 ರಲ್ಲಿ ಟ್ರೈನಿ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳೆ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.

ಅರ್ಜಿ ಸಲ್ಲಿಕೆ :

ಬಿಇಎಲ್ ನೇಮಕಾತಿ ಅಧಿಸೂಚನೆ 2021 ರಲ್ಲಿ ಟ್ರೈನಿ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ತುಂಬಿ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕ :

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 6/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/10/2021

ಇದನ್ನೂ ಓದಿರಿ: FSSAI Recruitment 2021 : 233 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here