Belagavi-outfit-for-winter-session

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಆರಂಭವಾಗಲಿದ್ದು, ಕುಂದಾನಗರಿ ಬೆಳಗಾವಿ ಸಂಪೂರ್ಣವಾಗಿ ಸಜ್ಜಾಗಿದೆ. ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿವೇಶನಕ್ಕೆ ಮಾಡಲಾದ ತಯಾರಿಗಳನ್ನು ಪರಿಶೀಲಿಸಿದರು.

ಅಧಿವೇಶನಕ್ಕೆ ಮಾಡಲಾದ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಕಾಗೇರಿ ಅವರು, “ನಾಳೆ ಬೆಳಗ್ಗೆ 10.30ಕ್ಕೆ ಕಾರ್ಯಕಲಾಪಗಳ ಸಮಿತಿಯ ಸಭೆ ನಡೆಯಲಿದ್ದು, ಎಲ್ಲಾ ಪಕ್ಷದ ಸದಸ್ಯರು ಭಾಗವಹಿಸಲಿದ್ದಾರೆ. ಸಭೆಯ ಎಲ್ಲಾ ದಿನದ ಕಾರ್ಯ ಕಲಾಪದ ವಿವರಗಳನ್ನ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಚರ್ಚೆ ಮಾಡಿ ಕಾರ್ಯಕಲಾಪದ ವಿವರ ಪಡೆಯುತ್ತೇವೆ” ಎಂದರು.

ಮಾಧ್ಯಮದ ಜೊತೆಯಲ್ಲಿ ಮಾತನ್ನು ಮುಂದುವರೆಸುತ್ತ, “ಈ ಅಧಿವೇಶನದಲ್ಲಿ ಎರಡು ದಿನವಾದರೂ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯ ಬಗ್ಗೆ ವಿಷಯಗಳನ್ನು ಚರ್ಚೆ ಮಾಡಬೇಕು ಎಂದು ಸಲಹೆಗಳು ಬಂದಿವೆ. ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಕಲಾಪ ಚೆನ್ನಾಗಿ ನಡೆಯಲು ಅಗತ್ಯವಿರುವ ಎಲ್ಲ ತಯಾರಿಗಳನ್ನು ಮಾಡಲಾಗಿದೆ” ಎಂದರು.

ಇದನ್ನೂ ಓದಿರಿ: ‘ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ’: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿಕೆ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here