ನವದೆಹಲಿ : ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಮತ್ತು ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ದೇಶದ ಅತ್ಯುನ್ನತ ಪುರಸ್ಕಾರವಾದ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರಕಾರ ಘೋಷಣೆ ಮಾಡಿದೆ.

ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರಕಾರ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ, ಹಿಂದಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಭೂಪೇನ್ ಹಜಾರಿಕಾ ಮತ್ತು ಸಾಮಾಜಿಕ ಕ್ಷೇತ್ರದ ಸೇವೆಗಾಗಿ ನಾನಾಜಿ ದೇಶಮುಖ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ನಾಳೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ರಾಷ್ಟಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಸಿದ್ಧಗಂಗಾ ಶ್ರೀಗಳಿಗೆ ಸಿಗಲಿಲ್ಲ ‘ಭಾರತ ರತ್ನ’

ಈ ಮೂಲಕ ಶತಾಯುಷಿ, ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಸ್ವಾಮೀಜಿಗಳಿಗೆ ಪ್ರಶಸ್ತಿ ಸಿಗುವುದೆಂಬ ಕರ್ನಾಟಕದ ಕೋಟ್ಯಾಂತರ ಮಂದಿಯ ನಿರೀಕ್ಷೆ ಹುಸಿಯಾಗಿದೆ.

Image Copyright : google.com

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here