ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ (Gujarat Assembly Election Results) ಭರ್ಜರಿ ಗೆಲುವು ಕಂಡಿರುವ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆಗೂ ಮೊದಲೇ ಘೋಷಣೆ ಮಾಡಿತ್ತು. ಅದರಂತೆ ಭೂಪೇಂದ್ರ ಪಟೇಲ್ ಇಂದು (ಡಿಸೆಂಬರ್ 12) ಎರಡನೇ ಬಾರಿಗೆ ಗುಜರಾತ್ನ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಬಿಜೆಪಿ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಈ ಬಾರಿ ಭೂಪೇಂದ್ರ ಪಟೇಲ್ ಭರ್ಜರಿ ಅಂತರದಿಂದ ಜಯ ಸಾಧಿಸಿದ್ದರು. ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿತ್ತು.
ಇದನ್ನೂ ಓದಿರಿ: ಅಭಿಷೇಕ್ ಅಂಬರೀಶ್-ಅವಿವಾ ನಿಶ್ಚಿತಾರ್ಥ;ಶುಭಕೋರಿದ ಯಶ್ ಹಾಗೂ ದರ್ಶನ
ಇಂದು ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ಬಳಿ ಇರುವ ಹೆಲಿಪ್ಯಾಡ್ ಮೈದಾನದಲ್ಲಿ ಗುಜರಾತ್ ರಾಜ್ಯಪಾಲ ಆಚಾರ್ಯ ದೇವ್ರತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಪ್ರಮಾಣವಚನ ಭೋದಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಇದನ್ನೂ ಓದಿರಿ: ಭಾರತ-ಪಾಕಿಸ್ತಾನ ಸರಣಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸಚಿವ ಸಚಿವ ಎಸ್ ಜೈಶಂಕರ್