big-breaking-entry-into-the-politics-of-karnataka-singam

ನವದೆಹಲಿ: ರಾಜ್ಯ ಪೋಲಿಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ, ರಾಜಿನಾಮೆ ನೀಡಿರುವ ಅಣ್ಣಾಮಲೈ ಈಗ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ನೇತ್ರತ್ವದಲ್ಲಿ ನಡೆಯುವ ಸಭೆಯಲ್ಲಿ ಬಿಜೆಪಿ ಸೇರಲಿದ್ದಾರೆ.

ರಾಜ್ಯ ಪೋಲಿಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಮಯದಲ್ಲಿ ಸಿಂಗಂ ಎಂಬ ಖ್ಯಾತಿಯನ್ನು ಗಳಿಸಿದ್ದ ಇವರು, ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ವಯಕ್ತಿಕ ಜೀವನ ಮತ್ತು ಹಲವಾರು ಕೆಲಸಗಳಿಗೆ ವೃತ್ತಿ ಅಡ್ಡಿಯಾಗುತ್ತಿದೆ ಎಂಬ ಕಾರಣವೊಡ್ಡಿ ರಾಜಿನಾಮೆಯನ್ನೂ ಸಲ್ಲಿಸಿದ್ದರು. ನಂತರ ಅವರು ರಾಜಕೀಯಕ್ಕೆ ಎಂಟ್ರಿ ಕೊಡಬಹುದು ಎಂದು ಹೇಳಲಾಗಿತ್ತಾದರೂ ನನಗೆ ಸದ್ಯ ಯಾವುದೇ ರಾಜಕೀಯದ ಕುರಿತು ಅನುಭವವಿಲ್ಲ ಎಂದು ಹೇಳಿದ್ದರು. ಆದರೆ ಈಗ ಜೆಪಿ ನಡ್ದಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2021 ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಸ್ಪರ್ದೆಗೆ ಇಳಿಯಲು ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here