big-news-kannada-poet-dr-siddalingaiah-died-from-corona

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ (67) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಡಾ. ಸಿದ್ದಲಿಂಗಯ್ಯ ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ದಲಿತರ ದ್ವನಿಯಾಗಿ, ದಲಿತ ಬಂಡಾಯ ಚಳುವಳಿಗಳಲ್ಲಿ ಬಾಗಿಯಾಗಿದ್ದರು.

ಕಳೆದ ಮೇ 2 ರಂದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರಿಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಆ ನಂತರ ಚಿಕಿತ್ಸೆಗಾಗಿ ಹಲವು ಆಸ್ಪತ್ರೆಗಳನ್ನು ಅಲೆದರೂ ಬೆಡ್ ಸಿಕ್ಕಿರಲಿಲ್ಲ. ಆನಂತರ ಡಿಸಿಎಂ ಅಶ್ವತ್ ನಾರಾಯಣ ಅವರಿಗೆ ವಿಷಯ ತಿಳಿಯುತ್ತಿದ್ದಂತೆ ಬೆಡ್ ವ್ಯವಸ್ಥೆ ಮಾಡಿಕೊಟ್ಟಿದ್ದರು. ಇದರಿಂದಾಗಿ ಮೇ 3 ರಂದು ಆಸ್ಪತ್ರೆಗೆ ದಾಖಲಾಗಲು ಸಾಧ್ಯವಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಸೋಮವಾರ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚೇತರಿಕೆ ಕಂಡುಬರುತ್ತಿದ್ದರೂ ಇಂದು ದಿಡೀರ್ ಆರೋಗ್ಯದಲ್ಲಿ ವ್ಯತ್ಯಾಸವುಂಟಾಗಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿರಿ: ಪತ್ರಕರ್ತ, ಹಿರಿಯ ಚಲನಚಿತ್ರ ನಟ ಸುರೇಶ್ ಚಂದ್ರ ಕೊರೋನಾದಿಂದ ನಿಧನ

ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರ ಕವಿತೆಗಳು, ಏಕಲವ್ಯ, ನೆಲಸಮ, ಪಂಚಮ, ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2, ಆತ್ಮಕಥೆಯಾದ ಊರುಕೇರಿ- ಭಾಗ-1 ಮತ್ತು ಬಾಗ 2 ಸೇರಿ ಇನ್ನೂ ಅನೇಕ ಕೃತಿಗಳನ್ನು ಡಾ. ಸಿದ್ದಲಿಂಗಯ್ಯ ಅವರು ರಚಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here