BIGG NEWS: ಅಕ್ಟೋಬರ್ ವರೆಗೂ ಭಾರಿ ವಾಹನ ಸಂಚಾರಕ್ಕೆ ಆಗುಂಬೆ ರಸ್ತೆಯಲ್ಲಿ ನಿರ್ಬಂಧ

heavy-vehicles-banned-on-agumbe-ghat-road

ಮಲೆನಾಡು ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169-ಎ ತೀರ್ಥಹಳ್ಳಿ – ಉಡುಪಿ ರಸ್ತೆಯ ಆಗುಂಬೆ ಘಾಟ್ ನಲ್ಲಿ ಬರುವ ಅಕ್ಟೋಬರ್ ವರೆಗೂ ಭಾರಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಈ ಪ್ರದೇಶದಲ್ಲಿ ಭಾರಿ ಮಳೆಯಾಗುವುದರಿಂದ ರಸ್ತೆ ಕುಸಿತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಜಿ .ಜಗದೀಶ್ ಈ ಆದೇಶ ಹೊರಡಿಸಿದ್ದಾರೆ.

ಬದಲಿ ಮಾರ್ಗಗಳು ಇಂತಿವೆ:

ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಬದಲಿ ಮಾರ್ಗವನ್ನು ಸೂಚಿಸಿದ್ದು, ಉಡುಪಿ- ಸಿದ್ಧಾಪುರ- ಹೊಸಂಗಡಿ- ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು ಕಾರ್ಕಳ- ಹೆಬ್ರಿ -ಸಿದ್ಧಾಪುರ -ಹೊಸಂಗಡಿ -ಬಾಳೆಬರೆ ಘಾಟ್- ಹುಲಿಕಲ್- ಮಾಸ್ತಿಕಟ್ಟೆ -ತೀರ್ಥಹಳ್ಳಿ -ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೋವಿಡ್-19: ರಾಜ್ಯದಲ್ಲಿಂದು 3979 ಹೊಸ ಪ್ರಕರಣ ಪತ್ತೆ, 9768 ಚೇತರಿಕೆ, 138 ಸಾವು !

ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಇಳಿಜಾರು ಪ್ರದೇಶವಾಗಿದೆ. ಮಳೆಗಾಲದಲ್ಲಿ ಭಾರಿ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು ಅಪಘಾತಗಳು ಸಂಭವಿಸುತ್ತವೆ. ಈ ಮೂಲಕ ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಗಳು ಇರುತ್ತವೆ. ಈ ಕಾರಣಕ್ಕಾಗಿ ಕೇಂದ್ರ ಮೋಟಾರ್ ವಾಹನ ಕಾಯಿದೆ ಕಲಂ ಹಾಗೂ ಮೋಟಾರು ವಾಹನಗಳ ನಿಯಮ ಪ್ರಕಾರ ಅಕ್ಟೋಬರ್ 15 ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here