ಬೆಂಗಳೂರು: ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹಲವಾರು ಬದಲಾವಣೆಗಳು ಉಂಟಾಗುತ್ತಿವೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜನಾರ್ದನ ರೆಡ್ಡಿ ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನ ಸಿಗದ ಹಿನ್ನಲೆಯಲ್ಲಿ ಹೊಸ ಪಕ್ಷ ಕಟ್ಟಬೇಕಾದ ಅನಿವಾರ್ಯತೆ ಉಂಟಾಗಿದೆ. ಹೀಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಕಟ್ಟಿ ರಾಜ್ಯದಾದ್ಯಂತ ಬಲಪಡಿಸುತ್ತೇನೆ ಎಂದು ಹೇಳಿದರು. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುವೆ. ರಾಜ್ಯದ ಪ್ರತಿಯೊಂದು ಮನೆಗೆ ತೆರಳುತ್ತೇನೆ ಎಂದು ಹೇಳಿದರು.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಕಟ್ಟಿ ಬೆಳೆಸುವ ಕುರಿತು ಮಾತನಾಡಿದ ಜನಾರ್ದನ್ ರೆಡ್ಡಿ, ಕೇರಳವೇ ದಿನಗಳಲ್ಲಿ ಪಕ್ಷದ ಚಿಹ್ನೆ, ಕಚೇರಿ ಬಗ್ಗೆ ಮಾಹಿತಿ ನೀಡುತ್ತೇನೆ ಎಂದರು.
ಇದನ್ನೂ ಓದಿರಿ: ಸೈನಿಕರ ಒನ್ ರ‍್ಯಾಂಕ್ ಒನ್ ಪೆನ್ಶನ್ ಪರಿಷ್ಕರಿಸಲು ಕೇಂದ್ರ ಸಚಿವ ಸಂಪುಟ ಅಸ್ತು