ಬೆಂಗಳೂರು: ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಮತದಾರರ ಮಾಹಿತಿ ಸಂಗ್ರಹಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿಯನ್ನು ಸರಕಾರ ದುರ್ಬಳಕೆ ಮಾಡಿಕೊಂಡಿದೆ. ಈ ಅಕ್ರಮದಲ್ಲಿ ಬಿಜೆಪಿ, ಮುಖ್ಯಮಂತ್ರಿ ಮತ್ತು ಸಚಿವ ಸಂಪುಟ ಸಚಿವರಾದ ಡಾ ಸಿ ಎನ್ ಅಶ್ವಥ್ ನಾರಾಯಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಇದನ್ನೂ ಓದಿರಿ: Sabarimala Yatra: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಓಪನ್, ಯಾತ್ರೆ ಶುರು
ಬೆಂಗಳೂರಿನ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ನವೀಕರಣಕ್ಕೆ ಖಾಸಗಿ ಎನ್ ಜಿಒ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಈ ಅವಕಾಶವನ್ನು ಸಂಸ್ಥೆ ದುರುಪಯೋಗಪಡಿಸಿಕೊಂಡಿದ್ದು, ತನ್ನ ನೂರಾರು ಆಜೇಂಟ್ ರುಗಳಿಗೆ ನಕಲಿ ಐಡಿ ಕಾರ್ಡ್ ನೀಡಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿರಿ: ಮತದಾರರ ಪಟ್ಟಿ ಅಕ್ರಮ ಆರೋಪಕ್ಕೆ ಉತ್ತರ ನೀಡಲು ಬೊಮ್ಮಾಯಿ ನಕಾರ