ಬೆಂಗಳೂರು: ತೀವ್ರ ಅನಾರೋಗ್ಯದಿನದ ಆಸ್ಪತ್ರೆಗೆ ದಾಖಲಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ ಎಂ ಉದಾಸಿ (77) ಯವರು ಇಂದು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯದಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ತೀವ್ರ ಉಸಿರಾಟದ ತೊಂದರೆ ಇರುವ ಕಾರಣ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಹಿರಿಯ ಶಾಸಕ ಹಾಗೂ ಸಚಿವ ಸಿಎಂ ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ ಎಂ ಉದಾಸಿ ಒಬ್ಬ ಸಜ್ಜನ ಮತ್ತು ಕ್ರಿಯಾಶೀಲ ರಾಜಕಾರಣಿ. ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗಮಾತ್ರವಲ್ಲದೇ ರಾಜ್ಯಕ್ಕೆ ಅತ್ಯಂತ ಜನಪ್ರಿಯಿಯರಾಗಿದ್ದರು. ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಅಗಲಿಕೆಯ ದುಃಖ ಬಾರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿರಿ: Live Updates: ದೇಶದ ಜನತೆಗೆ ಮೋದಿ ಭರ್ಜರಿ ಸಿಹಿಸುದ್ದಿ !