ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ: ಅರುಣ್ ಸಿಂಗ್

bjp-will-definitely-take-action-against-whoever-speaking

ಬೆಂಗಳೂರು: ಪಕ್ಷದ ವಿರುದ್ಧವಾಗಿ ಯಾರೂ ಮಾತನಾಡಬಾರದು, ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಎರಡರಿಂದ ಮೂರೂ ಜನರು ನಡೆದುಕೊಳ್ಳುತ್ತಿದ್ದು, ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ.

ಬಿಜೆಪಿ ಕಾರ್ಯಾಲಯದಲ್ಲಿ ಕೋರ್ ಕಮೀಟಿ ಸಭೆಯಲ್ಲಿ ಬಾಗಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷವಿರೋಧಿ ಹೇಳಿಕೆಯನ್ನು ನೀಡುವವರಿಗೆ ಈ ರೀತಿ ಮುಂದುವರೆಸದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಪಕ್ಷ ವಿರೋದಿ ಚಟುವಟಿಕೆಯಲ್ಲಿ ಬಾಗಿಯಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ತಮ್ಮ ಮಾತನ್ನು ಮುಂದುವರೆಸಿ, ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಯಡಿಯೂರಪ್ಪ ನೇತೃತ್ವದ ರಾಜ್ಯಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಪಕ್ಷದ ಮುಖಂಡರು ಮುಂದಾಗಬೇಕು ಎಂದು ಹೇಳಿದರು.

ಇದನ್ನೂ ಓದಿರಿ: ಅಥ್ಲೀಟ್ ಮಿಲ್ಕಾ ಸಿಂಗ್ ಆರೋಗ್ಯ ಗಂಭೀರ: ಐಸಿಯುಗೆ ದಾಖಲು

LEAVE A REPLY

Please enter your comment!
Please enter your name here