bjp-stages-protest-rahul-gandhi-savarkar-helped-british-remark

ಮುಂಬೈ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು, ರಾಹುಲ್ ಗಾಂಧಿ ಭಾವಚಿತ್ರಕ್ಕೆ ಚಪ್ಪಲಿ, ಬೂಟು ಎಸೆಯುವ ಮೂಲಕ ಪ್ರತಿಭಟನೆ ಮಾಡಿದ್ದಾರೆ.

ಭರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, “ಹಣಕ್ಕಾಗಿ (ಸ್ಟೈಪಂಡ್) ಬ್ರಿಟಿಷರಿಗೆ ಸಹಾಯ ಮಾಡಿದ್ದರು” ಎಂದು ರಾಹುಲ್ ಗಾಂಧಿ ಹೇಳಿಕೆಯನ್ನು ನೀಡಿದ್ದರು. ಇದನ್ನು ವಿರೋಧಿಸಿ ಬಿಜೆಪಿ ನಾಯಕ ರಾಮ್‌ ಕದಮ್‌ ನೇತೃತ್ವದಲ್ಲಿ “ಜೂತಾ ಮಾರೊ ಅಂದೋಲನ್‌” ಆಯೋಜಿಸಿ ಪ್ರತಿಭಟನೆ ನಡೆಸಲಾಗಿದೆ.

ಇದೆ ಸಮಯದಲ್ಲಿ ರಾಮ್‌ ಕದಮ್‌ ಅವರು ಮಾತನಾಡಿ, “ರಾಹುಲ್ ಗಾಂಧಿ ಮಾಡಿರುವ ಅವಹೇಳನಕಾರಿ ಹೇಳಿಕೆಗಳು ಖಂಡನೀಯ, ದಿಗಿಲು ಹುಟ್ಟಿಸುವಂತಿವೆ. ಅವರು ಕ್ಷಮೆ ಯಾಚಿಸಬೇಕು. ಪದೇ ಪದೇ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅದು ಸ್ವೀಕಾರಾರ್ಹವಲ್ಲ” ಎಂದು ಹೇಳಿದರು.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಅವರ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶನಿವಾರ ತರಾಟೆಗೆ ತೆಗೆದುಕೊಂಡರು ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅಂತಹ ಹೇಳಿಕೆಯನ್ನು ಬೆಂಬಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅಪ್ಪು ಡ್ರೀಮ್ ಪ್ರಾಜೆಕ್ಟ್ ‘ಗಂಧದ ಗುಡಿ’ ಟ್ರೈಲರ್ ಬಿಡುಗಡೆ, ಪ್ರಧಾನಿ ಮೋದಿ ಪ್ರಶಂಸೆ

ಕರ್ನಾಟಕದಲ್ಲಿ ಭಾರತ್‌ ಜೋಡೊ ಯಾತ್ರೆ ಕೈಗೊಳ್ಳುತ್ತಿರುವ ರಾಹುಲ್‌ ಗಾಂಧಿ, ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, “ನಾನು ಇತಿಹಾಸ ಅಧ್ಯಯನ ಮಾಡಿದ್ದೇನೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ವು ಬ್ರಿಟಿಷರಿಗೆ ಸಹಕಾರ ನೀಡಿದೆ. ಹಾಗೆಯೇ, ಸಾವರ್ಕರ್‌ ಅವರೂ ವೇತನಕ್ಕಾಗಿ ಬ್ರಿಟಿಷರ ಪರ ಕೆಲಸ ಮಾಡಿದ್ದಾರೆ” ಹೇಳಿಕೆಯನ್ನು ನೀಡಿದ್ದರು.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here