ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಡೀಸೆಲ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅಪ್ರೆಂಟಿಸ್‌ಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬಿಎಂಟಿಸಿ ಒಟ್ಟು 500 ಡೀಸೆಲ್ ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿಮಾಡಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 10ನೇ ತರಗತಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.
10 ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕವೇ ಅರ್ಜಿ ಸಲ್ಲಿಸಬೇಕು. ಇದೇ ನವೆಂಬರ್ 18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಒಟ್ಟು ಹುದ್ದೆಗಳು :
ಡೀಸೆಲ್ ಮೆಕ್ಯಾನಿಕ್ ಹುದ್ದೆಗಳು 500
ವಿದ್ಯಾರ್ಹತೆ :
ಬಿಎಂಟಿಸಿಯಲ್ಲಿ ಖಾಲಿ ಇರುವ ಡೀಸೆಲ್ ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ/SSLC ಪಾಸಾಗಿರಬೇಕು.
ಉದ್ಯೋಗದ ಸ್ಥಳ :
ಡೀಸೆಲ್ ಮೆಕ್ಯಾನಿಕ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ :
ಡೀಸೆಲ್ ಮೆಕ್ಯಾನಿಕ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 8,000-9,000 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಮೊದಲಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಲಾಗುತ್ತದೆ. ನಂತರದಲ್ಲಿ ವಯಕ್ತಿಕ ಸಂದರ್ಶನದ ಆದಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2021
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ apprenticeshipindia.org ಗೆ ಭೇಟಿ ನೀಡಬಹುದು. ಅಲ್ಲಿ ನೀಡಲಾದ ಮಾಹಿತಿಗಳನ್ನು ಸರಿಯಾಗಿ ತಿಳಿದುಕೊಂಡು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ.
10th pass ITI completed