brig-ls-lidder-laid-to-final-rest-with-full-military-honours-in-delhi

ನವದೆಹಲಿ: ತಮಿಳುನಾಡಿನ ಕನ್ನೂರು ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆ ಮುಖ್ಯಸ್ಥ ಸಿ ಡಿ ಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರಗಳನ್ನು ದೆಹಲಿಯ ಅವರ ನಿವಾಸಕ್ಕೆ ಕರೆತರಲಾಗಿದೆ. ಅವರ ಪಾರ್ಥಿವ ಶರೀರಕ್ಕೆ ಕೇಂದ್ರದ ನಾಯಕರು, ಹಿರಿಯ ಸೇನಾ ಅಧಿಕಾರಿಗಳು ಸೇರಿದಂತೆ ಗಣ್ಯರು ನಮನ ಸಲ್ಲಿಸಿದ್ದಾರೆ.

ಇದೇ ದುರಂತದಲ್ಲಿ ಅಸುನೀಗಿದ ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿಡ್ಡರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ದೆಹಲಿ ಕಂಟೋನ್ಮೆಂಟ್ ನ ಬ್ರಾರ್ ಸ್ಕ್ವಾರ್ ನಲ್ಲಿ ನೆರವೇರಿದೆ. ಇದಕ್ಕೂ ಮುನ್ನ ಅವರ ಪಾರ್ಥಿವ ಶರೀರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಪಡೆ ಮುಖ್ಯಸ್ಥ ಜನರಲ್ ಎಂ ಎಂ ನರವಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸಹ ಅಂತಿಮ ನಮನ ಸಲ್ಲಿಸಿದರು.

 

LEAVE A REPLY

Please enter your comment!
Please enter your name here